ಅಕ್ಕಪಕ್ಕ ಕುಳಿತ ಹಾಲಿ-ಮಾಜಿ ಸಿಎಂ

0
28

ಬೆಂಗಳೂರು: ಸುತ್ತೂರಿನ ಕಾರ್ಯಕ್ರಮದಲ್ಲಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಒಂದೇ ವೇದಿಕೆಯಲ್ಲಿ ಅಕ್ಕಪಕ್ಕ ಕುಳಿತು ಉಭಯ ಕುಶಲೋಪರಿ ವಿಚಾರಿಸಿದ ಘಟನೆ ನಡೆಯಿತು.
ಮೈಸೂರು ಜಿಲ್ಲೆಯ ಸುತ್ತೂರು ವೀರಸಿಂಹಾಸನ ಮಹಾಸಂಸ್ಥಾನ ಮಠದಲ್ಲಿ ಲಿಂಗೈಕರಾದ ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿಯವರ 103ನೇ ಜಯಂತಿ ಅಂಗವಾಗಿ ಕಾರ್ಯಕ್ರಮ ನಡೆಯಿತು. ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಗುರುಕುಲದ ನೂತನ ಕಟ್ಟಡ ಉದ್ಘಾಟನೆ ಮಾಡಿದರು.
ಇನ್ನು ವೇದಿಕೆ ಕಾರ್ಯಕ್ರಮದಲ್ಲಿ ಸಿಎಂ ಕುಮಾರಸ್ವಾಮಿ ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅಕ್ಕಪಕ್ಕದ ಕುರ್ಚಿ ಯಲ್ಲಿ ಕುಳಿತು ಪರಸ್ವರ ಕುಶಲೋಪರಿ ವಿಚಾರಿಸಿದರು.
ವೇದಿಕೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಭಾಷಣ ಆರಂಭಕ್ಕೂ ಮುನ್ನ ವೇದಿಕೆಯಲ್ಲಿನ ಎಲ್ಲ ಗಣ್ಯರಿಗೆ ಸ್ವಾಗತ ಕೋರಿದರು. ಆದರೆ ಯಡಿಯೂರಪ್ಪ ಅವರ ಹೆಸರನ್ನು ಮರೆತಿದ್ದರು. ಬಳಿಕ ಯಡಿಯೂರಪ್ಪ ಅವರೇ ನಿಮ್ಮ ಹೆಸರು ಮರೆತು ಹೋಯಿತು. ಕ್ಷಮಿಸಿ ಎಂದು ಕ್ಷಮೆಯಾಚಿಸಿದರು.

loading...