ಅ.6 ರಿಂದ 8 ವರೆಗೆ ಸಮುದ್ರಕ್ಕೆ ಇಳಿಯಲೇಬೇಡಿ

0
10

ಮಂಗಳೂರು: ಅರಬ್ಬೀ ಸಮುದ್ರದಲ್ಲಿ ತೀವ್ರ ವಾಯುಭಾರ ಕುಸಿತ ಉಂಟಾಗಿ ಚಂಡಮಾರುತವಾಗುವ ಸಂಭವವಿದ್ದು ದಕ್ಷಿಣ ಒಳನಾಡು ಮತ್ತು ಕರಾವಳಿ ಪ್ರದೇಶದಲ್ಲಿ ತೀವ್ರ ಮಳೆಯಾಗಲಿದೆ.

ಈ ಸಂದರ್ಭ ಸಮುದ್ರ ಪ್ರಕ್ಷುಬ್ಧಗೊಳ್ಳುವ ಸಾಧ್ಯತೆ ಇದ್ದು, ಅ.6 ರಿಂದ ಅ.8ರವರೆಗೆ ಮೀನುಗಾರಿಕೆಗೆ ತೆರಳದಂತೆ ಹಾಗೂ ಸಮುದ್ರಕ್ಕಿಳಿದಿರುವ ಮೀನುಗಾರರು ಅ.5ರೊಳಗೆ ಹಿಂದಿರುಗಬೇಕೆಂದು ಹವಾಮಾನ ಇಲಾಖೆ ಸೂಚಿಸಿದೆ.
ಅರಬ್ಬೀ ಸಮುದ್ರದ ಲಕ್ಷದ್ವೀಪ ಭಾಗದಲ್ಲಿ ನಿಮ್ನ ಒತ್ತಡ ಸೃಷ್ಟಿಯಾಗಿದ್ದು, ಅ.5ರ ವೇಳೆಗೆ ವಾಯುಭಾರ ಕುಸಿತದ ಸ್ವರೂಪ ಪಡೆಯಲಿದೆ. ಆ ಬಳಿಕ ಇದು ಇನ್ನಷ್ಟು ತೀವ್ರಗೊಂಡು ಚಂಡಮಾರುತ ಬೀಸುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈ ಹಿನ್ನೆಲೆಯಲ್ಲಿ ಅ.6ರಿಂದ 8ರವರೆಗೆ ಮೀನುಗಾರರು ಸಮುದ್ರಕ್ಕೆ ತೆರಳದಂತೆ ಹಾಗೂ ಸಮುದ್ರಕ್ಕೆ ತೆರಳಿರುವ ಮೀನುಗಾರರು ಅ.5ರೊಳಗೆ ದಡಕ್ಕೆ ಹಿಂತಿರುಗುವಂತೆ ಮೀನುಗಾರಿಕಾ ಉಪನಿರ್ದೇಶಕರು ಪ್ರಕಟಣೆ ಹೊರಡಿಸಿದ್ದಾರೆ.
ಅಲ್ಲದೆ ಈ ಬಗ್ಗೆ ಮಂಗಳೂರು ಬಂದರಿನಲ್ಲಿ ಮೈಕ್ ಮೂಲಕ ಮೀನುಗಾರರಿಗೆ ಮುನ್ನೆಚ್ಚರಿಕೆ ನೀಡಲಾಗುತ್ತಿದೆ ಎಂದು ಮಂಗಳೂರು ಟ್ರಾಲ್ ಬೋಟ್ ಮೀನುಗಾರರ ಸಂಘದ ಪ್ರಧಾನ ಕಾರ್ಯದರ್ಶಿ ರಾಜೇಶ್ ಪುತ್ರನ್ ಉಳ್ಳಾಲ್ ತಿಳಿಸಿದ್ದಾರೆ.

loading...