ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ

0
33

ಶ್ರೀನಗರ: ಭಾರತದ ಗಡಿ ನುಸುಳಲು ಯತ್ನಿಸುತ್ತಿದ್ದ ಇಬ್ಬರು ಉಗ್ರರನ್ನು ಭಾರತೀಯ ಸೇನೆ ಹತ್ಯೆ ಮಾಡಿದೆ ಎಂದು ಶನಿವಾರ ತಿಳಿದುಬಂದಿದೆ.
ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ಮಚಿಲ್ ಸೆಕ್ಟರ್ ಬಳಿಯ ಗಡಿ ನಿಯಂತ್ರಣ ರೇಖೆ ಬಳಿ ಇಬ್ಬರು ಉಗ್ರರು ಭಾರತದ ಗಡಿ ನಸುಳಲು ಯತ್ನ ನಡೆಸುತ್ತಿದ್ದರು. ಈ ವೇಳೆ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ರಕ್ಷಣಾ ವಕ್ತಾರ ಕರ್ನಲ್ ರಾಜೇಶ್ ಕಲಿಯಾ ಅವರು ಹೇಳಿದ್ದಾರೆ.
ಗಡಿ ನಿಯಂತ್ರಣ ರೇಖೆ ಬಳಿ ಭಾರತೀಯ ಸೇನೆ ಗಸ್ತು ತಿರುಗುತ್ತಿದ್ದು, ಈ ವೇಳೆ ಶಂಕಾಸ್ಪದ ಚಟುವಟಿಕೆಗಳು ಕಂಡು ಬಂದಿತ್ತು. ಈ ವೇಳೆ ಉಗ್ರರು ಹಾಗೂ ಸೇನಾಪಡೆ ನಡುವೆ ನಡೆದು, ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ.

loading...