ಇಮ್ರಾನ್ ಪಾಕ್ ಪಿಎಂ ಆಗ್ಬೇಕಾದ್ರೆ ಮೈತ್ರಿ ಬೇಕೆ ಬೇಕು

0
23

ಇಸ್ಲಾಮಾಬಾದ: ಪಾಕಿಸ್ತಾನ ಸಾರ್ವಜನಿಕ ಚುನಾವಣೆಯಲ್ಲಿ ಇಮ್ರಾನ್ ಖಾನ್ ಪಕ್ಷ ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಉಳಿದ ಪಕ್ಷಗಳಿಗಿಂತ ಹೆಚ್ಚು ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ಇಮ್ರಾನ್ ಖಾನ್ ಯಶಸ್ವಿಯಾಗಿದ್ದಾರೆ. ಆದ್ರೆ ಬಹುಮತ ಬಂದಿಲ್ಲ.

ಮಾಜಿ ಕ್ರಿಕೆಟರ್ ಇಮ್ರಾನ್ ಖಾನ್ ಪಕ್ಷ 119 ಸ್ಥಾನಗಳಲ್ಲಿ ಜಯ ಸಾಧಿಸಿದೆ. ಇಮ್ರಾನ್ ಪಿಟಿಐ ಪಕ್ಷಕ್ಕೆ ಬಹುಮತ ಸಿಕ್ಕಿಲ್ಲ. ಹಾಗಾಗಿ ಅಧಿಕಾರಕ್ಕೇರಲು ಇಮ್ರಾನ್ ಸ್ವತಂತ್ರ ಅಭ್ಯರ್ಥಿಗಳ ಬೆಂಬಲ ಪಡೆಯಬೇಕಾದ ಅನಿವಾರ್ಯತೆಯಿದೆ. ಇನ್ನೂ ಕೆಲ ಪ್ರಾಂತ್ಯಗಳಲ್ಲಿ ಮತ ಎಣಿಕೆ ನಡೆಯುತ್ತಿದೆ.

ಇಮ್ರಾನ್ ಪಕ್ಷ ಮುನ್ನಡೆ ಸಾಧಿಸುತ್ತಿದ್ದಂತೆ ಬೆಂಬಲಿಗರ ಹರ್ಷ ಮುಗಿಲು ಮುಟ್ಟಿದೆ. ರಸ್ತೆಗಳಲ್ಲಿ ಸಂಭ್ರಮ ಮನೆ ಮಾಡಿದೆ. ಪಾಕಿಸ್ತಾನದಲ್ಲಿ 272 ಲೋಕಸಭಾ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಇಮ್ರಾನ್ 119 ಕ್ಷೇತ್ರದಲ್ಲಿ ಜಯ ಸಾಧಿಸಿದ್ದರೆ ಪಿಪಿಪಿ 42 ಕ್ಷೇತ್ರಗಳಲ್ಲಿ ಮುಂದಿದೆ. ಸರ್ಕಾರ ರಚಿಸಲು 137 ಸೀಟಿನ ಅವಶ್ಯಕತೆಯಿದೆ.

ವಿಶೇಷವೆಂದ್ರೆ ಐದು ಕ್ಷೇತ್ರಗಳಲ್ಲಿ ಸ್ಪರ್ಧೆ ನಡೆಸಿದ್ದ ಇಮ್ರಾನ್ ಐದೂ ಕ್ಷೇತ್ರಗಳಲ್ಲಿ ಜಯ ಗಳಿಸಿದ್ದಾರೆ. ಈ ಮೂಲಕ ಇತಿಹಾಸ ಬರೆದಿದ್ದಾರೆ.

loading...