ಉಮಾಶಂಕರ ಹಿರೇಮಠ ಪ್ರಶಸ್ತಿಗೆ ಆಯ್ಕೆ

0
26

ಕನ್ನಡಮ್ಮ ಸುದ್ದಿ-ಯಲಬುರ್ಗಾ: ದಾವಣಗೆರೆಯ ಭಾರತೀಯ ಕಲಾ ಸಾಂಸ್ಕøತಿಕ ಅಕಾಡೆಮಿಯು ಕೊಡಮಾಡಲ್ಪಡುವ ‘ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ’ಗೆ ಸ್ಥಳೀಯ ಯುವ ಬರಹಗಾರ ಉಮಾಶಂಕರ ಬ. ಹಿರೇಮಠ ಆಯ್ಕೆಯಾಗಿದ್ದಾರೆ. ಜು.22ರಂದು ದಾವಣಗೆರೆಯ ಚನ್ನಗಿರಿ ವಿರುಪಾಕ್ಷಪ್ಪ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಭಾರತದ ಪ್ರಜಾಪ್ರಭುತ್ವಕ್ಕಿರುವ ಸವಾಲುಗಳು ಎಂಬ ವಿಷಯದ ಕುರಿತು ಆಯೋಜಿಸಿರುವ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
ಅಕಾಡೆಮಿಯ 3ನೇ ವರ್ಷದ ವಾರ್ಷಿಕೋತ್ಸವ ಅಂಗವಾಗಿ ಹಮ್ಮಿಕೊಂಡಿರುವ ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ನಡೆಯಲಿದೆ. ಪತ್ರಿಕಾ ರಂಗದಲ್ಲಿ ಸಲ್ಲಿಸಿದ ಸೇವೆಯನ್ನು ಗುರುತಿಸಿ ಹಿರೇಮಠ ಅವರಿಗೆ 17-18ನೇ ಸಾಲಿನ ರಾಜ್ಯಪ್ರಶಸ್ತಿ ನೀಡಿ ಗೌರವಿಸಲಿದ್ದಾರೆ. ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ಎನ್. ಮಲ್ಲೇಶಪ್ಪ ಕುಕ್ಕುವಾಡ ಅವರ ಅಧ್ಯಕ್ಷತೆಯಲ್ಲಿ ನಡೆಯುವ ವಿಚಾರ ಸಂಕಿರಣ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಕೂಡಲಸಂಗಮಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ, ದಾವಣಗೆರೆಯ ವಿರಕ್ತಮಠದ ಬಸವಪ್ರಭು ಸ್ವಾಮಿ ಸಾನಿಧ್ಯ ವಹಿಸಲಿದ್ದಾರೆ. ಶಾಸಕ ಎಸ್.ಎ. ರವೀಂದ್ರನಾಥ, ಡಿಎಸ್‍ಎಸ್ ರಾಜ್ಯಾಧ್ಯಕ್ಷ ಡಾ.ಎನ್. ಮೂರ್ತಿ, ಶಾಸಕ ಎಸ್.ವಿ ರಾಮಚಂದ್ರಪ್ಪ, ಶಾಸಕ ಪ್ರೋ.ಎನ್.ಲಿಂಗಣ್ಣ, ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್‍ಸಾಬ, ಹರಿಹರ ಶಾಸಕ ಎಸ್. ರಾಮಪ್ಪ ಪಾಲ್ಗೊಳ್ಳಲಿದ್ದಾರೆ. ಸಹಾಯಕ ಪ್ರಾಧ್ಯಾಪಕ ಡಾ. ಅಶೋಕಕುಮಾರ ಪಾಳೇದ ಉಪನ್ಯಾಸ ನೀಡಲಿದ್ದಾರೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

loading...