ಎನ್‌ಡಿಟಿ ಜಿಲ್ಲಾ ಸಲಹಾ ಸಮಿತಿ ಸಭೆಯಲ್ಲಿ ನವೀಕರಣ ಅರ್ಜಿಗಳ ಪರಿಶೀಲನೆ

0
11

ವಿಜಯಪುರ: ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ನಿಷೇಧ ಕಾಯ್ದೆಯಡಿ ರಚಿಸಲಾದ ಜಿಲ್ಲಾ ಸಲಹಾ ಸಮಿತಿ ಸಭೆಯು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಮಹೇಂದ್ರ ಕಾಪ್ಸೆ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಗರದ ಆರೋಗ್ಯ ಇಲಾಖೆ ಕಚೇರಿ ಸಭಾಂಗಣದಲ್ಲಿ ನಡೆಯಿತು.
ಸಭೆಯಲ್ಲಿ ಅಲ್ಟಾçಸೋನೋಗ್ರಾಫಿ ಯಂತ್ರ ನವೀಕರಣ ಹಾಗೂ ಈ ಕಾಯ್ದೆಯಡಿ ಆಸ್ಪತ್ರೆಗಳ ನೋಂದಣಿಗೆ ಸಂಬಂಧಪಟ್ಟ ಒಟ್ಟು ೯ ಆಸ್ಪತ್ರೆಗಳಿಗೆ ಸಂಬಂಧಪಟ್ಟ ಅರ್ಜಿ ಹಾಗೂ ದಾಖಲಾತಿಗಳನ್ನು ಪರಿಶೀಲಿಸಲಾಯಿತು.
ಕಾನೂನು ಬಾಹಿರವಾಗಿ ಅಲ್ಟಾçಸೋನೋಗ್ರಾಫಿ ಯಂತ್ರ ಬಳಸುವುದು ಕಾನೂನಿನ ರಿತ್ಯ ಅಪರಾಧವಾಗಿದೆ. ಈ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಯಾವುದೇ ರೀತಿಯ ಕಾನೂನು ಬಾಹಿರವಾಗಿ ಇಂತಹ ಯಂತ್ರಗಳನ್ನು ಬಳಸುತ್ತಿರುವುದು, ಅನಧಿಕೃತವಾಗಿ ಭ್ರೂಣ ಲಿಂಗ ಪತ್ತೆ ಮಾಡುವುದು ಕಂಡು ಬಂದಲ್ಲಿ ಅಂತಹ ಆಸ್ಪತ್ರೆಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಅದರಂತೆ ಇಂತಹ ಯಂತ್ರಗಳ ಬಳಕೆಗೆ ಸಂಬಂಧಪಟ್ಟಂತೆ ನಿಯೋಜಿತ ತಂಡದಿಂದ ಪರಿಶೀಲನೆ ನಡೆಸಲಾಗುವುದು ಎಂದು ಆರೋಗ್ಯ ಇಲಾಖೆ ಅಧಿಕಾರಿ ಡಾ.ಮಹೇಂದ್ರ ಕಾಪ್ಸೆ ಅವರು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಸಲಹಾ ಸಮಿತಿಯ ಸದಸ್ಯರುಗಳು, ಉಪಸ್ಥಿತರಿದ್ದು, ಅವಶ್ಯಕ ಸಲಹೆ ಸೂಚನೆಗಳನ್ನು ನೀಡಿದರು. ನಿರ್ದೇಶಕರಾದ ಎಸ್.ಜಿ.ಲೋಣಿ ಸ್ವಾಗತಿಸಿ ಪ್ರಸ್ತಾವಿಕವಾಗಿ ಮಾತನಾಡಿದರು. ನಗರದ ವಿವಿಧ ಶಾಲೆ ಕಾಲೇಜುಗಳಿಂದ ೨೦೦೦ ವಿದ್ಯಾರ್ಥಿ ವಿದ್ಯಾರ್ಥಿನಿಯರು, ದೈಹಿಕ ಶಿಕ್ಷಕರು, ಇಲಾಖೆಯ ತರಬೇತಿದಾರರು ಭಾಗವಹಿಸಿದ್ದರು.

loading...