ಕಣಿವೆಗೆ ಸರ್ಕಾರಿ ಬಸ್ ಉರುಳಿ: 34 ಪ್ರಯಾಣಿಕರು ದುರ್ಮರಣ

0
19

ಹೈದರಾಬಾದ್:ಸರ್ಕಾರಿ ಬಸ್ಸೊಂದು ಕಣಿವೆಗೆ ಉರುಳಿ ಬಿದ್ದು 34 ಮಂದಿ ಪ್ರಯಾಣಿಕರು ಮೃತಪಟ್ಟು, ಇತರೆ 20 ಮಂದಿ ತೀವ್ರ ಗಾಯಗೊಂಡಿರುವ ಭೀಕರ ದುರಂತ ತೆಲಂಗಾಣದ ಜಗ್ತಿಯಾಲ್ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ಆಂಧ್ರಪ್ರದೇಶದ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಸೇರಿದ ಬಸ್ ಕರೀಂನಗರ ಬಳಿ ಕೊಂಡುಗಟ್ಟು ಸಮೀಪ ತಿರುವಿನಲ್ಲಿ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿ ಬಿತ್ತು.

ಘಟನೆ ನಡೆದ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದರು. ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಶೋಚನೀಯವಾಗಿರುವುದರಿಂದ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ತೆಲಂಗಾಣದಲ್ಲಿ ಈ ವರ್ಷ ಸಂಭವಿಸಿದ ಅತ್ಯಂತ ಭೀಕರ ರಸ್ತೆ ಅಪಘಾತ ಇದಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪ್ರಯಾಣಿಕರ ಸಂಬಂಧಿಕರು ಸ್ಥಳಕ್ಕೆ ಧಾವಿಸಿ ರೋದಿಸುತ್ತಿದ್ದ ದೃಶ್ಯ ಕರುಣಾಜನಕವಾಗಿತ್ತು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

loading...