ಕತ್ತಿ, ಕೋರೆಗೆ ಹಿನ್ನಡೆ ಕಡಾಡಿಗೆ ಜಾಕ್ ಪಾಟ್

0
22

ಕತ್ತಿ, ಕೋರೆಗೆ ಹಿನ್ನಡೆ ಕಡಾಡಿಗೆ ಜಾಕ್ ಪಾಟ್

ಬೆಂಗಳೂರು

ರಾಜ್ಯಸಭಾ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದು, ರಾಜ್ಯ ಕೋರ್ ಕಮಿಟಿ ಕಳುಹಿಸಿದ್ದ ಮೂರು ಹೆಸರುಗಳನ್ನು ತಿರಸ್ಕರಿಸಿ ಇಬ್ಬರು ಅಚ್ಚರಿಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ.

ರಾಜ್ಯಸಭಾ ಚುನಾವಣೆಗೆ ಬಿಜೆಪಿ ಈರಣ್ಣ ಕಡಾಡಿ ಮತ್ತು ಅಶೋಕ್ ಗಸ್ತಿಯವರಿಗೆ ಟಿಕೆಟ್ ನೀಡಿದೆ. ಈ ಮೂಲಕ ಉತ್ತರ ಕರ್ನಾಟಕ ಮತ್ತು ಹೈದರಾಬಾದ್ ಕರ್ನಾಟಕ ಪ್ರದೇಶಗಳಿಗೆ ಆದ್ಯತೆ ನೀಡಿದೆ.

ರಾಜ್ಯಸಭಾ ಚುನಾವಣೆ ಟಿಕೆಟ್ ಗಾಗಿ ಬಿಜೆಪಿಯಲ್ಲಿ ಭಾರಿ ಪೈಪೋಟಿ ಕಂಡುಬಂದಿತ್ತು. ಸಹೋದರ ರಮೇಶ್ ಕತ್ತಿಯವರಿಗೆ ಟಿಕೆಟ್ ನೀಡಬೇಕೆಂದು ಶಾಸಕ ಉಮೇಶ್ ಕತ್ತಿಯವರು ಪಕ್ಷದ ನಾಯಕರ ಮೇಲೆ ಒತ್ತಡ ಹಾಕಿದ್ದರು. ಹಾಲಿ ರಾಜ್ಯಸಭಾ ಸಂಸದ ಪ್ರಭಾಕರ ಕೋರೆಯವರು ಕೂಡಾ ಪುನಾರಯ್ಕೆ ಬಯಸಿ ಟಿಕೆಟ್ ಆಕಾಂಕ್ಷೆ ಹೊಂದಿದ್ದರು.

ಕರಾವಳಿ ಕರ್ನಾಟಕದ ಹೋಟೆಲ್ ಉದ್ಯಮಿ ಕೆ ಪ್ರಕಾಶ್ ಶೆಟ್ಟಿಯವರ ಹೆಸರು ಕೂಡಾ ಕೊನೆಯ ಕ್ಷಣದಲ್ಲಿ ಕೇಳಿ ಬಂದಿತ್ತು. ರಾಜ್ಯ ಬಿಜೆಪಿ ಈ ಮೂವರ ಹೆಸರನ್ನೂ ಹೊಸದಿಲ್ಲಿಗೆ ಶಿಫಾರಸ್ಸು ಮಾಡಿತ್ತು.
ಆದರೆ ಕೋರೆ ಅವರು ಎರಡು ಬಾರಿ ರಾಜ್ಯಸಭೆಗೆ ಆಯ್ಕೆಯಾಗಿದ್ದರು. ಬದಲಾಗಿ ಕೋರೆಯವರಿಗೆ 72ವರ್ಷ. ವಯಸ್ಸಾಗಿರುವುದರಿಂದ ಅವರಿಗೆ ಮಣೆ ಹಾಕಲಿಲ್ಲ ಎಂದು ತಿಳಿದು ಬಂದಿದೆ.

loading...