ಕರಾವಳಿ ಸೇರಿದಂತೆ 10 ಜಿಲ್ಲೆಗಳಲ್ಲಿ ಇಂದೂ ಮತ್ತೆ ವರುಣನ ಆರ್ಭಟ

0
4

ಬೆಂಗಳೂರು:- ಮಳೆಯ ಅಬ್ಬರಕ್ಕೆ ಜನತೆ ನಲುಗಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಸೋಮವಾರ ಸಹ ವರುಣ ಮತ್ತೆ ಅಬ್ಬರಿಸಲಿದ್ದಾನೆ.
10 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹವಾಮಾನ ಇಲಾಖೆಯ ಮಾಹಿತಿಯ ಪ್ರಕಾರ, ರಾಜ್ಯದ 10 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಮಲೆನಾಡು ಭಾಗದ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು , ಕೊಡಗು ಮತ್ತು ಯಾದಗಿರಿ, ಬೀದರ್, ಕಲಬುರಗಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದೂ ಇಲಾಖೆ ಮುನ್ಸೂಚನೆ ನೀಡಿದೆ.

loading...