ಕರೆಗಳನ್ನು ಡಿನೋಟಿಫೈ ಮಾಡುವ ಯಾವುದೇ ಪ್ರಸ್ತಾಪ ಇಲ್ಲ

0
26

ವಿಜಯಪುರ : ರಾಜ್ಯ ಸರ್ಕಾರ ಕೆರೆಗಳನ್ನು ಡಿನೋಟಿಫೈ ಮಾಡುತ್ತಿದ್ದಾರೆ ಎಂದು ಆರೋಪಿಸುತ್ತದ್ದು, ಇದು ರಾಜಕೀಯ ವಿರೋಧಿಗಳು ರಾಜ್ಯ ಸರ್ಕಾರ ಕೆರೆಗಳನ್ನು ಡಿನೋಟಿಫೈ ಮಾಡುತ್ತಿವೆಂದು ಅಪಪ್ರಚಾರ ಮಾಡುತ್ತಿದ್ದಾರೆ. ಕರೆಗಳನ್ನು ಡಿನೋಟಿಫೈ ಮಾಡುವ ಯಾವುದೇ ಪ್ರಸ್ತಾಪ ಇಲ್ಲ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಸ್ಪಷ್ಟಪಡಿಸಿದರು.
ನಗರದ ಬಿಎಲ್‍ಡಿಇ ಸಂಸ್ಥೆಯ ಆವರಣದಲ್ಲಿ ರಾಷ್ಟ್ರೀಯ ಜಲ ಬಿರಾದರಿ ವತಿಯಿಂದ ಮೂರನೇ ದಿನ ನಡೆದ ಬರ ಮುಕ್ತ ಭಾರತಕ್ಕಾಗಿ ರಾಷ್ಟ್ರೀಯ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೆರೆಗಳನ್ನು ಡಿನೋಟಿಫೈ ವಿಚಾರವಾಗಲಿ ಸರ್ಕಾರಕ್ಕೆ ಇಲ್ಲವೇ ಇಲ್ಲ. ಆದರೆ ಈ ವಿಷಯವನ್ನು ವಿನಾಕಾರಣ ರಾಜಕೀಯ ವಿರೋಧಿಗಳು ದೊಡ್ಡದು ಮಾಡುತ್ತಿವೆ, ಸಿದ್ಧರಾಮಯ್ಯ ನೇತೃತ್ವದ ಸರ್ಕಾರ ಕೆರೆಗಳನ್ನು ನುಂಗಿ ಹಾಕುತ್ತಿದೆ ಎಂದು ಖಂಡಿಸಿ ಅಭಿಯಾನ ನಡೆಸಲು ಮುಂದಾಗಿವೆ, ಕೆರೆಗಳು ಡಿನೋಟಿಫೈ ಮಾಡುವ ವಿಚಾರವೇ ಸರ್ಕಾರ ಮಾಡಿಲ್ಲ ಎಂದು ಸಿದ್ಧರಾಮಯ್ಯ ಸ್ಪಷ್ಟಪಡಿಸಿದರು.
ಮಳೆಯಾಶ್ರಿತ ಬೆಳೆ ಬೆಳೆಯುವ ರಾಜ್ಯಗಳಲ್ಲಿ ಕರ್ನಾಟಕವೇ ಎರಡನೇಯ ಸ್ಥಾನ ಪಡೆದುಕೊಂಡಿದೆ, ರಾಜಸ್ತಾನ ಮೊದಲನೇ ಸ್ಥಾನ ಪಡೆದುಕೊಂಡಿದೆ.
ರಾಜ್ಯದಲ್ಲಿ ಕಳೆದ 13 ವರ್ಷಗಳಿಂದ ಬರ ಪರಿಸ್ಥಿತಿ ಎದುರಾಗುತ್ತಿದೆ, ಕಳೆದ ಮೂರ್ನಾಲ್ಕು ವರ್ಷಗಳಿಂದಲೂ ಭೀಕರ ಬರ ಪರಿಸ್ಥಿತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಹನಿ ನೀರನ್ನು ಸಹ ಸಮರ್ಥವಾಗಿ ಸದ್ಭಳಕೆ ಮಾಡಿಕೊಳ್ಳಲು ಮುಂದಾಗಬೇಕಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನೀರಾವರಿ ಯೋಜನೆಗಳ ಜೊತೆಗೆ ಕೆರೆ ತುಂಬುವ ಯೋಜನೆಗೆ ಪ್ರಥಮ ಆದ್ಯತೆ ನೀಡಿದೆ ಎಂದರು.ರಾಜ್ಯದಲ್ಲಿ ಮಳೆಯಾಶ್ರಿತ ಬೆಳೆ ಪ್ರದೇಶಗಳಲ್ಲಿ ಕೃಷಿ ಹೊಂಡಗಳು ರೈತರಿಗೆ ಅತ್ಯಂತ ಅನುಕೂಲವಾಗಿವೆ, ಈ ರೀತಿಯ ಮಹತ್ವದ ಯೋಜನೆ ಜಾರಿಗೊಳಿಸಿದ ಕೀರ್ತಿ ಕಾಂಗ್ರೆಸ್ ಸರ್ಕಾರಕ್ಕೆ ಸಲ್ಲುತ್ತಿದ್ದು, ರಾಜ್ಯದಲ್ಲಿ 1.5 ಲಕ್ಷ ಕೃಷಿ ಹೊಂಡಗಳನ್ನು ನಿರ್ಮಿಸಲಾಗಿದೆ. ಸಾಂಪ್ರದಾಯಿಕ ನೀರಾವರಿ ಪದ್ಧತಿಯನ್ನೇ ಹೆಚ್ಚು ನೆಚ್ಚಿಕೊಂಡಿದ್ದೇವೆ, ಆದರೆ ತುಂತುರು ಹಾಗೂ ಹನಿ ನೀರಾವರಿ ಪದ್ಧತಿ ಅಳವಡಿಕೆ ಈಗಿನ ಅವಶ್ಯಕತೆ, ಈ ಹಿನ್ನೆಲೆಯಲ್ಲಿ ತುಂತುರು ಹಾಗೂ ಹನಿ ನೀರಾವರಿ ಯೋಜನೆಗಳಿಗೆ ಸರ್ಕಾರ ಆದ್ಯತೆ ನೀಡಲಿದೆ ಎಂದರು.

loading...