ಕಲಂ35ರ ಮರು ಪರಿಶೀಲನೆ, ಅರ್ಜಿ ವಿಚಾರಣೆ ಮುಂದೂಡಿದ ‘ಸುಪ್ರೀಂ’

0
16

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ನಾಗರಿಕರಿಗೆ ವಿಶೇಷಾಧಿಕಾರ ನೀಡಿರುವ ಸಂವಿಧಾನದ ಕಲಂ 35ಎ ಅನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಂದೂಡಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಪಂಚಾಯಿತಿ ಮತ್ತು ಮುನ್ಸಿಪಲ್ ಕಾರ್ಪೋರೇಷನ್ ಚುನಾವಣೆ ಇರುವುದರಿಂದ ಕಲಂ 35ಎ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಮುಂದೂಡುವಂತೆ ಕೇಂದ್ರ ಸರ್ಕಾರ ಮಾಡಿದ್ದ ಅರ್ಜಿಗೆ ಮನ್ನಣೆ ನೀಡಿ ಸರ್ವೋಚ್ಛ ನ್ಯಾಯಾಲಯ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಆಗಸ್ಟ್ 27ಕ್ಕೆ ಮುಂದೂಡಿದೆ. 

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರಾದ ಸಿಜೆಐ ದೀಪಕ್ ಮಿಶ್ರಾ ಹಾಗೂ ನ್ಯಾಯಮೂರ್ತಿ ಎಎಂ ಖಾನ್ವಿಲ್ಕರ್ ಅವರು ವಿಚಾರಣೆಯನ್ನು ಆಗಸ್ಟ್ 27ಕ್ಕೆ ಮುಂದೂಡಿದರು.

ಇನ್ನು ಜಮ್ಮು ಮತ್ತು ಕಾಶ್ಮೀರ ನಾಗರಿಕರಿಗೆ ವಿಶೇಷ ಹಕ್ಕು ನೀಡಿರುವ ಸಂವಿಧಾನದ ಕಲಂ 35ನ ವಾಸ್ತವಿಕತೆ ಮತ್ತು ಪ್ರಸ್ತುತತೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ ಮಾಡಲಾಗಿತ್ತು. ಅರ್ಜಿಯಲ್ಲಿ ‘ದೇಶದ ಯಾವುದೇ ಭಾಗದಲ್ಲಿ ಆಸ್ತಿ ಹೊಂದಲು ಮತ್ತು ವಾಸ ಮಾಡಲು ಭಾರತದ ನಾಗರಿಕರಿಗೆ ಮೂಲಭೂತ ಹಕ್ಕಿದೆ. ಇದನ್ನು 35ಎ ಉಲ್ಲಂಘಿಸುತ್ತದೆ. ಅಲ್ಲದೆ, ದೇಶದ ಸಂವಿಧಾನಕ್ಕೆ ಸಂಸತ್‌ ನಲ್ಲಿ ಮಾತ್ರ ತಿದ್ದುಪಡಿ ತರಲು ಸಾಧ್ಯ. ಆದರೆ 35ಎಯನ್ನು ಸಂಸತ್‌ ನ ಹೊರಗೆ, ರಾಷ್ಟ್ರಪತಿಗಳು ವಿಶೇಷಾಧಿಕಾರ ಬಳಸಿ ಅಧಿಸೂಚನೆ ಹೊರಡಿಸಿದ್ದಾರೆ ಎಂಬುದು ಅರ್ಜಿದಾರರು ಹೇಳಿದ್ದಾರೆ. 

ಅಂತೆಯೇ ಈ ವಿಚಾರಕ್ಕೆ ಕಾಶ್ಮೀರವೂ ಸೇರಿದಂತೆ ದೇಶಾದ್ಯಂತ ಪರ-ವಿರೋಧ ಚರ್ಚೆಗಳು ಆರಂಭವಾಗಿವೆ.

loading...