ಕಾಗ್ರೆಸ್‌ಗೆ ಶೀಘ್ರದಲ್ಲಯೇ ಗುಡ್‌ಬೈ: ರಮೇಶ್‌ ಜಾರಕಿಹೋಳಿ

0
20

ಬೆಳಗಾವಿ-ಅತಿ ಶೀಘ್ರದಲ್ಲಿಯೇ ಕಾಂಗ್ರೆಸ್‌ ಪಕ್ಷಕ್ಕೆ ರಾಜಿನಾಮೆ ಸಲ್ಲಿಸುವ ದಿನವನ್ನು ಪ್ರಕಟಿಸಲಿದ್ದೇನೆ ಎಂದು ಪಕ್ಷದ ಬಂಡಾಯ ಶಾಸಕ ರಮೇಶ್‌ ಜಾರಕಿಹೋಳಿ ಹೇಳಿದ್ದಾರೆ.
ಗೋಕಾಕ್‌ನಲ್ಲಿ‌ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 1999ರ ಬಳಿಕ ಕಾಂಗ್ರೆಸ್ ಪಕ್ಷದಲ್ಲಿ ಗುಂಪುಗಾರಿಕೆ ಹೆಚ್ಚಾಗಿದೆ. ಇದೀಗ ಗುಂಪುಗಾರಿಕೆ ಮಿತಿ‌ಮೀರಿದೆ. ನಾನು ತಾಂತ್ರಿಕವಾಗಿ ಮಾತ್ರ ಕಾಂಗ್ರೆಸ್ ಪಕ್ಷದಲ್ಲಿ ಇದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.
ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ರಮೇಶ್ ಕತ್ತಿ ಟಿಕೆಟ್ ವಂಚಿತರಾದಾಗ ಯಡಿಯೂರಪ್ಪ ಅವರು ಬೆಳಗಾವಿಗೆ ಆಗಮಿಸಿ‌ ಮಾತುಕತೆ ಮೂಲಕ‌ ಬಿಕ್ಕಟ್ಟನ್ನು‌ ಶಮನಗೊಳಿಸಿದ್ದರು. ಆದರೆ, ಕಾಂಗ್ರೆಸ್ ಪಕ್ಷದಿಂದ ಯಾರೂ ತಮ್ಮನ್ನು‌ ಸಂಪರ್ಕಿಸಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಇಂತಹ ಪರಿಸ್ಥಿತಿಯೇ ಇಲ್ಲ ಎಂದು ಹೇಳಿದರು.
ಇಂಥ ವಾತಾವರಣದಲ್ಲಿ ಕಾಂಗ್ರೆಸ್‌ನಲ್ಲಿ ಮುಂದುವರಿಯುವುದು ಅಸಾಧ್ಯ. ಹಾಗಾಗಿ, ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ‌‌ ಕೊಟ್ಟು ಬೇರೆ ಪಕ್ಷ ಸೇರ್ಪಡೆ ಬಗ್ಗೆ ತೀರ್ಮಾನ ಮಾಡುತ್ತೇನೆ ಎಂದು ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.

loading...