ಕುಷ್ಟಗಿ ಕ್ಷೆÃತ್ರದಲ್ಲಿ ಬಿರುಸಿನ ಚುನಾವಣಾ ಪ್ರಚಾರ

0
4

 

ಕನ್ನಡಮ್ಮ ಸುದ್ದಿ-ಕೊಪ್ಪಳ: ದೇಶವನ್ನು ೭೦ ವರ್ಷಗಳ ಕಾಲ ಆಳ್ವಿಕೆ ಮಾಡಿ ಬಡತನದಲ್ಲೆÃ ಇರುವಂತೆ ಮಾಡಿದ ಕಾಂಗ್ರೆಸ್‌ನ ದುರಾಡಳಿತ ಕೊನೆಗೊಳಿಸಿ ಐದು ವರ್ಷದಲ್ಲಿ ಜಗತ್ತು ನಮ್ಮತ್ತ ತಿರುಗಿ ನೋಡುವಂತೆ ಮಾಡಿದ ಮೋದಿ ಸರ್ಕಾರ ಮತ್ತೊಮ್ಮೆ ಆಡಳಿತಕ್ಕೆ ಬರುವುದು ಶತಃಸಿದ್ಧ ಎಂದು ಕುಷ್ಟಗಿಯ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ್ ವಿಶ್ವಾಸ ವ್ಯಕ್ತಪಡಿಸಿದರು.
ಸೋಮವಾರ ಕುಷ್ಟಗಿ ವಿಧಾನಸಭಾ ಕ್ಷೆÃತ್ರದ ಹನುಮನಾಳ, ಹನುಮಸಾಗರ ಹಾಗೂ ಬಿಜಕಲ್ ಗ್ರಾಮಗಳಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಲೋಕಸಭಾ ಚುನಾವಣೆಯ ಪ್ರಚಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ ಅವರು ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಲು ಸಂಸದ ಸಂಗಣ್ಣ ಕರಡಿಯವರಿಗೆ ಮತ ಹಾಕಿ ಅವರನ್ನು ಗೆಲ್ಲಿಸುವ ಮೂಲಕ ದೇಶಸೇವೆ ಮಾಡಲು ಅವಕಾಶ ನೀಡಬೇಕೆಂದು ಮನವಿ ಮಾಡಿದರು. ಅಭ್ಯರ್ಥಿ, ಸಂಸದ ಸಂಗಣ್ಣ ಕರಡಿ ಮಾತನಾಡಿ, ದೇಶದ ರೈತರ, ಬಡವರ, ಮಹಿಳೆಯರ, ಯುವಕರ ಹಾಗೂ ವೃದ್ಧರ ಬಗ್ಗೆ ಕಾಳಜಿ ಇರುವುದು ಬಿಜೆಪಿಗೆ ಮಾತ್ರ. ಮತ್ತೊಮ್ಮೆ ಮೋದಿಯವರಿಗಾಗಿ ದುಡಿಯೋಣ ಎಂದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಕೆ. ಶರಣಪ್ಪ ವಕೀಲರು, ಕನಕಗಿರಿ ಶಾಸಕ ಬಸವರಾಜ ದಡೇಸುಗೂರು, ಬಿಜೆಪಿ ಜಿಲ್ಲಾಧ್ಯಕ್ಷ ಸಿಂಗನಾಳ ವಿರೂಪಾಕ್ಷಪ್ಪ, ಒಬಿಸಿ ಜಿಲ್ಲಾಧ್ಯಕ್ಷ ಮುದ್ಲಾಪÅರ ವಿರೂಪಾಕ್ಷಪ್ಪ, ಜಿಪಂ ಸದಸ್ಯ ನೇಮಣ್ಣ ಮೇಲಸಕ್ರಿ, ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.

loading...