ಕೊಡಗಿನಲ್ಲಿ ಸ್ಥಗಿತಗೊಂಡಿದ್ದ ಶಾಲಾ-ಕಾಲೇಜುಗಳು ಆರಂಭ

0
22

ಬೆಂಗಳೂರು: ಕಳೆದ ಒಂದು ತಿಂಗಳಿನಿಂದ ಸುರಿಯುತ್ತಿರುವ ಭಾರಿ ಮಳೆ ಪರಿಣಾಮ ಪ್ರಕೃತಿ ವಿಕೋಪ, ಜಲ ಪ್ರಳಯ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯಲ್ಲಿ ಸ್ಥಗಿತಗೊಂಡಿದ್ದ ಶಾಲಾ-ಕಾಲೇಜುಗಳು ಆರಂಭವಾಗಿವೆ.
ವಿದ್ಯಾರ್ಥಿಗಳು ಸಹ, ಶಾಲಾ-ಕಾಲೇಜುಗಳಿಗೆ ಆಗಮಿಸುತ್ತಿದ್ದಾರೆ.ಆದರೆ ಶಿಕ್ಷಕರು,ಉಪನ್ಯಾಸಕರು ಶಾಲಾ-ಕಾಲೇಜುಗಳಿಗೆ ಆಗಮಿ ಸಲು ಸಾಧ್ಯವಾಗುತ್ತಿಲ್ಲ.ಕೆಲವರು ಗ್ರಾಮೀಣ ಪ್ರದೇಶಗಳಲ್ಲಿ ಇರುವುದರಿಂದ ರಸ್ತೆ ಸಂಪರ್ಕ ಇಲ್ಲದ ಕಾರಣ ಕಾಲೇಜಿಗೆ ಬರಲು ಆಗುತ್ತಿಲ್ಲ.ಆದರೂ ಕೆಲವು ಕಾಲೇಜಿನಲ್ಲಿ ಉಪನ್ಯಾಸಕರನ್ನು ಪರಿಹಾರ ಕೇಂದ್ರದಲ್ಲಿ ನೋಡಲ್ ಅಧಿಕಾರಿಗಳನ್ನಾಗಿ ಮಾಡಿರು ವುದು ಇದೀಗ ಸಮಸ್ಯೆಗೆ ಕಾರಣವಾಗಿದೆ.
ಗ್ರಾಮೀಣ ಪ್ರದೇಶದಲ್ಲಿ ಶಾಲೆಗೆ ಹೋಗಲೇಬೇಕು ಎಂದು ಪ್ರವಾಹ ಪೀಡಿತ ಪ್ರದೇಶಗಳನ್ನು ದಾಟಿ ಶಾಲಾ-ಕಾಲೇಜುಗಳಿಗೆ ಬರುವ ವಿದ್ಯಾರ್ಥಿಗಳು, ಸಂಜೆವರೆಗೂ ಶಿಕ್ಷಕರಿಲ್ಲದೆ ಕೆಲವೊಂದು ತರಗತಿಯಲ್ಲಿ ಕುಳಿತು ಪಾಠ ಕೇಳಿ ಮನೆಗೆ ವಾಪಸ್ ಆಗುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

loading...