ಕೊರೋನಾ ಭೀತಿಗೆ ಒಂದುವಾರ ಬೆಂಗಳೂರು ಲಾಕ್ ಡೌನ್…!

0
10

ಬೆಂಗಳೂರು
ಕೊರೋನಾ‌ ಮಹಾಮಾರಿ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶನಿವಾರ ಒಂದೇ ದಿನ ರಾಜ್ಯದಲ್ಲಿ 2798 ಜನರಿಗೆ ಸೋಂಕು ದೃಢಪಟ್ಟಿದೆ. ಈದರ ಬೆನ್ನಲೆ ಒಂದು ವಾರಗಳ ಕಾಲ ಬೆಂಗಳೂರುನ್ನು ಲಾಕ್ ಡೌನ್ ಮಾಡಲು ಸರಕಾರ ತಿರ್ಮಾನಿಸಿದೆ.

ಬೆಂಗಳೂರಿನಲ್ಲಿ 1533 ಜನರಿಗೆ ಸೋಂಕು ತಗುಲಿದೆ. ಇಂದು ಒಟ್ಟೂ 70 ಜನರು ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ 23 ಜನರು ಮೃತಪಟ್ಟಿದ್ದಾರೆ.

ಇದರ ನಡುವೆ ಮಂಗಳವಾರ ರಾತ್ರಿಯಿಂದ ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ ಒಂದು ವಾರ ಲಾಕ್ ಡೌನ್ ಮಾಡಲು ಸರಕಾರ ನಿರ್ಧರಿಸಿದೆ. ಇಡೀ ರಾಜ್ಯಕ್ಕೆ ಲಾಕ್ ಡೌನ್ ಮಾಡಬೇಕೋ ಬೇಡವೋ ಎನ್ನುವ ಕುರಿತು ಇನ್ನೂ ನಿರ್ಧಾರವಾಗಿಲ್ಲ. ಈ ಬಗ್ಗೆ ಸೋಮವಾರ ಘೋಷಣೆ ಸಾಧ್ಯತೆ ಇದೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 8 ಜನ ಬೆಂಗಳೂರಿನ ಉಸ್ತುವಾರಿಗಳ ಜೊತೆ ಚರ್ಚಿ ನಡೆಸಿದ್ದಾರೆ. ಚರ್ಚೆಯ ನಂತರ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ 8 ಗಂಟೆಯಿಂದ ಲಾಕ್ ಡೌನ್ ಬಗ್ಗೆ ಘೋಷಿಸಿದ್ದಾರೆ.

loading...