ಗುಣಮಟ್ಟದ ಶಿಕ್ಷಣದೊಂದಿಗೆ ಉಜ್ವಲ ಭವಿಷ್ಯ ನಿರ್ಮಿಸಲು ಶ್ರಮಿಸಿ : ಜಾರಕಿಹೊಳಿ

0
31

ಗೋಕಾಕ 31: ನಗರದಲ್ಲಿ ನೂತನವಾಗಿ ಆರಂಭಗೊಂಡಿರುವ ಆಕ್ಸ್‍ಪರ್ಡ ಸ್ಕೂಲಿಗೆ ಇತ್ತಿಚೆಗೆ ಸಣ್ಣ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಭೇಟಿ ನೀಡಿ ಶಾಲೆಯ ಆಡಳಿತ ವೈಖರಿಯನ್ನು ಕಂಡು ಮೆಚ್ಚುಗೆ ವ್ಯಕ್ತಪಡಿಸಿದರು.
ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುವುದರೊಂದಿಗೆ ಅವರ ಉಜ್ವಲ ಭವಿಷ್ಯವನ್ನು ನಿರ್ಮಿಸಲು ಶ್ರಮಿಸುವಂತೆ ಕರೆ ನೀಡಿದ ಅವರು ಶಾಲೆಯ ಅಭಿವೃದ್ದಿಗೆ ಬೇಕಾಗುವ ಎಲ್ಲ ಸಹಾಯ ಹಾಗೂ ಸಹಕಾರ ನೀಡುವದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಎ.ಎಸ್.ಭಜಂತ್ರಿ, ಪ್ರಾಚಾರ್ಯೆ ಜಯಶ್ರೀ ಭಜಂತ್ರಿ, ಶಿಕ್ಷಕರು ಸಿಬ್ಬಂದಿಗಳು ಉಪಸ್ಥಿತರಿದ್ದರು.

loading...

LEAVE A REPLY

Please enter your comment!
Please enter your name here