ಗ್ರಾಮೀಣ ಜನರಿಗೆ ಎಚ್.ಐ.ವಿ ಬಗ್ಗೆ ಅರಿವು ಮೂಡಿಸುವ ಆಂದೋಲನ: ಪಾಟೀಲ

0
56

ಬೆಳಗಾವಿ: ಸಮಾನ್ಯ ಜನರಿಗೆ ಎಚ್ ಐವಿ ಎಡ್ಸ್ ತಡೆಗಟ್ಟುವ ನಿಟ್ಟಿನಲ್ಲಿ ಏಡ್ಸ್ ಕುರಿತಾಗಿ ಡಿ.26ರಿಂದ ಮನೆ ಮನೆಗೆ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಏಡ್ಸ್ ನಿರೋಧಕ ಮತ್ತು ನಿಯಂತ್ರಣ ಘಟಕದಿಂದ ಜನ ಜಾಗೃತಿ ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ಕೇಸ್ಯಾಪ್ಸ್ ಜಂಟಿ‌ ನಿರ್ದೇಶಕ ಡಾ.ಸಂಜಯ ಪಾಟೀಲ ಹೇಳಿದರು.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಗ್ರಾಮೀಣ ಪ್ರದೇಶಲ್ಲಿರುವ ಜನರನ್ನು ಗಮನದಲ್ಲಿಟ್ಟುಕೊಂಡು ಈ ಆಂದೋಲನವನ್ನು ನಡೆಸಲಾಗುತ್ತಿದೆ. ಎಚ್.ಐ.ವಿ. ಸೋಂಕಿನ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಮಾಡುವುದು. ಸೋಂಕಿತರಿಗೆ ಲಭ್ಯವಿರುವ ಸೇವೆಗಳ ಕುರಿತಾರ ಮಾಹಿತಿಯನ್ನು ಮನೆ ಮನೆಗೆ ತಲುಪಿಸುವ ಉದ್ದೇಶ ಹೊಂದಿದ್ದೇವೆ ಎಂದರು.
ಸೋಂಕಿನ ಬಗ್ಗೆ ಸರಿಯಾದ ತಿಳುವಳಿಕೆ ಹಾಗೂ ಜ್ಞಾನವನ್ನು ಹೆಚ್ಚಿಸಬೇಕಿದೆ. ಎಚ್.ಐ.ವಿ.ಸೊಂಕಿನ ತಡೆ ಮತ್ತು ನಿಯಂತ್ರಣದಲ್ಲಿ ಜನರ ಪಾಲ್ಗೊಳ್ಳುವಿಕೆಯನ್ನು ಉತ್ತೇಜಿಸುವುದು ಹಾಗೂ ಹೆಚ್ಚಿನ ಜನರನ್ನು ಐಸಿಟಿಸಿ ಕೇಂದ್ರಗಳಿಗೆ ಭೇಟಿ ನೀಡಿ ಎಚ್.ವಿ.ಪರೀಕ್ಷೆ ಮಾಡಿಸಿಕೊಳ್ಳುವಂತೆ ಜಾಗೃತಿಯಿಂದ ನೋಡಿಕೊಳ್ಳುವುದು. ಸೋಂಕಿತರಲ್ಲಿರುವ ತಾರತಮ್ಯವನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಪ್ರಯತ್ನಿಸಲಾಗುವುದು ಎಂದು ಹೇಳಿದರು.
ಎಲ್ಲಾ ಗರ್ಭಿಣಿಯರು ತಮ್ಮ ಮೊದಲನೇ ತ್ರೈಮಾಸಿಕದಲ್ಲಿ ಎಚ್.ಐ.ವಿ. ಪರೀಕ್ಷೆ ಮಾಡಿಸಿಕೊಂಡು ಸೊಂಕು ಕಂಡುಬಂದಲ್ಲಿ ಏಆರ್ ಟಿ ಚಿಕಿತ್ಸೆಯೊಂದಿಗೆ ಸರಕಾರಿ ಆಸ್ಪತ್ರೆ ಯಲ್ಲಿ ಹೆರಿಗೆ ಮಾಡಿಸಿಕೊಳ್ಳಲು ಅವರಿಗೆ ಮನವೊಲಿಸಲಾಗುವುದು.
ಬೆಳಗಾವಿ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಸುಮಾರು 934720 ಮನೆಗಳಿದ್ದು ಶೆ.70ರಷ್ಟು ಮನೆಗಳಿಗೆ ಆಶಾ ಕಾರ್ಯಕರ್ತರ ಮೂಲಕ ಮನೆ ಮನೆಗೆ ಭೇಟಿ‌ ನೀಡಿ ಎಚ್.ಐ.ವಿ ಬಗ್ಗೆ ಜಾಗೃತಿ ಆಂಧೋಲನ ನಡೆಸುತ್ತೇವೆ ಎಂದರು.
ಜಿಲ್ಲೆಯಲ್ಲಿ 6 ಆ್ಯಂಟಿ ರೆಟ್ರೋವೈರಲ್ ಥೆರಪಿ ಕೇಂದ್ರಗಳು, 14 ಲಿಂಕ್ ಆ್ಯಂಟಿ ರೆಟ್ರೋವೈರಲ್ ಥೆರಪಿ ಮತ್ತು 9 ಲಿಂಕ್ ಪ್ಲಸ್ ಥೆರಪಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. 36758 ಜನರು ಈವರೆಗೆ ಆ್ಯಂಟಿ ರೆಟ್ರೋವೈರಲ್ ಥೆರಪಿ ಕೇಂದ್ರಗಳಲ್ಲಿ ನೋಂದಣಿಯಾಗಿದ್ದಾರೆ. ಈ ಪೈಕಿ 19309 ಸೋಂಕಿತರು ಕಂಡು‌ ಬಂದಿದ್ದಾರೆ. 19277 ಸೋಂಕಿತರ ಅರ್ಥಿಗಳು ಆ್ಯಂಟಿ ರೆಟ್ರೋವೈರಲ್ ಥೆರಪಿ ಔಷಧಿಯನ್ನು ನೀಡಲಾಗುತ್ತಿದೆ ಎಂದು ಹೇಳಿದರು.

loading...