ಚುನಾವಣೆ ಹಿನ್ನೆಲೆ: ಕೆ ಎಸ್ ಆರ್ ಟಿ ಸಿ ಬಸ್ ಗಳ ಸಂಚಾರದಲ್ಲಿ ವ್ಯತ್ಯಯ

0
6

ಬೆಂಗಳೂರು- ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಇದೇ 18 ರಂದು ಚುನಾವಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ನಾಳೆಯಿಂದ ಇದೇ 18ರ ವರೆಗೆ ಕೆ ಎಸ್ ಆರ್ ಟಿ ಸಿ ಬಸ್ ಗಳ ಸಂಚಾರದಲ್ಲಿ ವ್ಯತ್ಯವಾಗಲಿದೆ. ಪ್ರಯಾಣಿಕರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಮೊದಲ ಹಂತದ ಮತದಾನ 14 ಕ್ಷೇತ್ರಗಳಲ್ಲಿ ನಡೆಯಲಿದ್ದು, ಈ ವ್ಯಾಪ್ತಿಯ ಜಿಲ್ಲೆಗಳಲ್ಲಿ ರಾಜ್ಯ ರಸ್ತೆ ಸಾರಿಗೆ ನಿಗಮ ಚುನಾವಣೆ ಕಾರ್ಯಕ್ಕೆ ಮತ್ತು ಪೊಲೀಸ್ ಇಲಾಖೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬಸ್ಸುಗಳನ್ನು ಒದಗಿಸುತ್ತಿದೆ. ಹೀಗಾಗಿ ನಿಗಮದ ವಾಹನಗಳ ಕಾರ್ಯಚರಣೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಹೀಗಾಗಿ ಸಾರ್ವಜನಿಕ ಪ್ರಯಾಣಿಕರು ನಿಗಮದ ಜತೆ ಸಹಕರಿಸುವಂತೆ ಕೆ.ಎಸ್.ಆರ್.ಟಿ.ಸಿ ಮನವಿ ಮಾಡಿದೆ.

loading...