ಜಾತಿ ಗಣತಿಗೆ ಅಸ್ತು

0
19

ಬೆಂಗಳೂರು, ಸೆ.15: ಬಡತನ ರೇಖೆಗಿಂತ ಕೆಳಗಿರುವ ಬಡ ಕುಟುಂಬಗಳನ್ನು ಗುರುತಿಸುವ ಉದ್ದೇಶದಿಂದ ಸಾಮಾಜಿಕ ಆರ್ಥಿಕ ಹಾಗೂ ಜಾತಿ ಗಣತಿ ನಡೆಸಲು ಸಂಪುಟ ಒಪ್ಪಿಗೆ ನೀಡಿದೆ ಎಂದು ರಾಜ್ಯದ ಕಾನೂನು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಸಚಿವ ಸಂಪುಟದ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಸಂಪುಟದ ವಿವರ ನೀಡಿದ ಅವರು ಕೇಂದ್ರ ಸರ್ಕಾರ ಪ್ರಾಯೋಜಿಸಿರುವ ರಾಷ್ಟ್ತ್ರೀಯ ಜೀವನೋಪಾಯ ಯೋಜನೆಯನ್ನು ರಾಜ್ಯದಲ್ಲಿ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ.

ನಗರದ ಪ್ರದೇಶದ ಬಡ ಜನರು ವಾಸಿಸುವ ಪ್ರದೇಶಗಳಲ್ಲಿ ಕುಡಿಯುವ ನೀರು ಮತ್ತು ಒಳಚರಂಡಿ ಸೌಲಭ್ಯ ಕಲ್ಪಿಸಲು ಇಂಗ್ಲೇಂಡ್ ಸಂಸ್ಥೆಯೊಂದಿಗೆ ಮಾಡಿಕೊಳ್ಳಲಾಗಿರುವ ಒಪ್ಪಂದದ ಬಗ್ಗೆ ಚರ್ಚೆ ನಡೆಸಿ ಅದರ ಬದಲು ಕೇಂದ್ರ ಸರ್ಕಾರದ ಯೋಜನೆಯನ್ನು ಜಾರಿಗೆ ತರಲು ನಿರ್ಧರಿಸಲಾಗಿದೆ. ಸಣ್ಣ ಕೈಗಾರಿಕೆಗಳಿಗಾಗಿ ನೀಡಿರುವ ಸಾಲವನ್ನು ನಿಗದಿತ ಅವಧಿಯಲ್ಲಿ ಅವರು ಮರಳಿ ನೀಡಿದರೆ ಸುಸ್ಥಿ ಬಡ್ಡಿ ಮನ್ನಾ ಮಾಡಲು ನಿರ್ಧರಿಸಲಾಗಿದೆ ಎಂದರು.

loading...

LEAVE A REPLY

Please enter your comment!
Please enter your name here