ಜಾಹೀರಾತುಗಳಿಗಾಗಿ ಸಾರ್ವಜನಿಕರ ಹಣ ದುರ್ಬಳಕೆ  

0
9
ನವದೆಹಲಿ: ಆಡಳಿತಾರೂಢ ಪಕ್ಷವು ರಾಜಕೀಯ ಉದ್ದೇಶಗಳಿಗಾಗಿ ಸಾರ್ವಜನಿಕರ ಹಣವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂಬ ಆರೋಪಗಳು ಕೇಳಿ ಬಂದ ಹಿನ್ನಲೆಯಲ್ಲಿ ಕೇಂದ್ರ ಸೇರಿ 6 ರಾಜ್ಯಗಳಿಗೆ ಸುಪ್ರೀಂಕೋರ್ಟ್ ಶುಕ್ರವಾರ ನೋಟಿಸ್ ಜಾರಿ ಮಾಡಿದೆ. 
ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಎನ್’ಡಿಎ ಸರ್ಕಾರ ಹಾಗೂ ಬಿಜೆಪಿ ಆಡಳಿತದಲ್ಲಿರುವ ರಾಜ್ಯಗಳು ತಮ್ಮ ಜಾಹೀರಾತುಗಳಿಗಾಗಿ ಸಾರ್ವಜನಿಕರ ಹಣವನ್ನು ದುರ್ಬಳಕೆ ಮಾಡಿಕೊಳ್ಳುತ್ತದ್ದು, ಈ ಕುರಿತು ಆಡಳಿತಾರೂಢ ಪಕ್ಷಕ್ಕೆ ಸೂಕ್ತ ನಿರ್ದೇಶನ ನೀಡಬೇಕೆಂದು ಕೋರಿ ಬುರಾರಿಯ ಆಮ್ ಆದ್ಮಿ ಪಕ್ಷದ ಶಾಸಕ ಸಂಜೀವ್ ಝಾ ಅವರು ನ್ಯಾಯಾಲಯದ ಮೊರೆ ಹೋಗಿದ್ದರು. 
ಈ ಅರ್ಜಿಯನ್ನು ವಿಚಾರಣೆ ನಡೆಸಿರುವ ನ್ಯಾಯಾಮೂರ್ತಿ ರಂಜನ್ ಗೊಗೊಯ್ ಅವರಿದ್ದ ಪೀಠ, ಮಾಹಿತಿ ಮತ್ತು ಪ್ರಸಾರ ಇಲಾಖೆ, ಬಿಜೆಪಿ ಹಾಗೂ ಬಿಜೆಪಿ ಆಡಳಿತ ನಡೆಸುತ್ತಿರುವ ಉತ್ತರಪ್ರದೇಶ, ರಾಜಸ್ಥಾನ, ಮಧ್ಯಪ್ರದೇಶ, ಜಾರ್ಖಾಂಡ್, ಛತ್ತೀಸ್ಗಢ ಹಾಗೂ ತೆಲಂಗಾಣ ರಾಜ್ಯಗಳಿಗೆ ನೋಟಿಸ್ ಜಾರಿ ಮಾಡಿದೆ.
loading...