ಡಿಸಿಎಂ ಸವದಿ ನಸೀಬು ಇದ್ದರೆ ಸಿಎಂ ಆಗಲಿ: ಸಚಿವ ಜಾರಕಿಹೊಳಿ

0
46

ಬೆಳಗಾವಿ
ಅಥಣಿಯ ವಿಧಾನಸಭಾ ಕ್ಷೇತ್ರದಿಂದ ಡಿಸಿಎಂ ಲಕ್ಷö್ಮಣ ಸವದಿ ಅವನ ನಸೀಬು ಇದ್ದರೆ ಸಿಎಂ ಆಗಲಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು.
ಮಂಗಳವಾರ ಬೆಳಗಾವಿ ನೀರಾವರಿ ಇಲಾಖೆಯ ಪ್ರಗತಿಪರಿಶೀಲನಾ ಸಭೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.
ಅಥಣಿಯ ಮತಕ್ಷೇತ್ರದಲ್ಲಿ ಡಿಸಿಎಂ ಲಕ್ಷö್ಮಣ ಸವದಿ ಮುಂದಿನ ಮುಖ್ಯಮಂತ್ರಿ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಅವನ ನಸೀಬಿನಲ್ಲಿ ಮುಖ್ಯಮಂತ್ರಿ ಆಗುವುದಾದರೆ ಆಗಲಿ ಬಿಡಿ ಎಂದು ಮಾರ್ಮಿಕವಾಗಿ ನುಡಿದರು.
ನಿಗಮ ಮಂಡಳ ಅಧ್ಯಕ್ಷ ಸ್ಥಾನ ಭರ್ತಿ ಮಾಡುವುದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಹೈಕಮಾಂಡ್ ಮಾಡಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಬಿಜೆಪಿ ದೊಡ್ಡ ಪಕ್ಷ ಇದರಲ್ಲಿ ಕೆಲವರಿಗೆ ಅಸಮಾಧಾನ ಇರುವುದು ಸಹಜ. ಅದನ್ನು ಸರಿಪಡಿಸುವ ಸಾಮರ್ಥ್ಯ ನಮ್ಮ ಹೈಕಮಾಂಡ್‌ಗೆ ಇದೆ.

ನೀರಾವರಿ ಇಲಾಖೆ ಸಮಸ್ಯೆ ಕುರಿತು ಕಳೆದ ಒಂದೂವರೆ ತಿಂಗಳಿನಿAದ ರಾಜ್ಯಾದ್ಯಂತ ಪ್ರವಾಸ ಮಾಡಿ ಪರಿಹಾರ ಕಂಡುಕೊಳ್ಳುವAತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಗುರುವಾರ, ಶುಕ್ರವಾರ ಇಲಾಖಾವಾರು ಚರ್ಚೆ ನಡೆಸಿ ಮುಂದಿನ ಕ್ರಮದ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪನವರ ಮಾರ್ಗದರ್ಶನದಲ್ಲಿ ನಡೆಯುತ್ತೇವೆ ಎಂದರು.
ಇತ್ತೀಚೆಗೆ ಮಹಾರಾಷ್ಟçದ ಸಚಿವರಿಗೆ ಭೇಟಿ ನೀಡಿ ಕೊಲ್ಲಾಪುರ ಹಾಗೂ ಸಾಂಗ್ಲಿ ಅಧಿಕಾರಿಗಳ ಸಭೆ ನಡೆಸಿ ಬೆಳಗಾವಿ, ಬಾಗಲಕೋಟ ಮತ್ತು ವಿಜಯಪುರ ಮೂರು ಜಿಲ್ಲೆಯ ಜಿಲ್ಲಾಧಿಕಾರಿಗಳ ಜತೆಗೂ ಸಭೆ ಮಾಡಿ ಕೃಷ್ಣಾ ನದಿಗೆ ನೀರು ಬಿಡುವಾಗ ಮುಂಜಾಗೃತೆ ವಹಿಸುವಂತೆ ಸಮನ್ವಯತೆಯಿಂದ ಕೆಲಸ ಮಾಡಿದರೆ ಮುಂದೆ ಆಗುವ ಅನಾಹುತ ತಪ್ಪುತ್ತದೆ ಎಂದು ಹೇಳಿದರು.

loading...