ತಂಗಡಗಿ ಅನ್ಸಾರಿ ಅವಕಾಶವಾದಿ ರಾಜಕಾರಣಿಗಳು: ಈಶ್ವರಪ್ಪ

0
24
 

ಕನ್ನಡಮ್ಮ ಸುದ್ದಿ-ಗಂಗಾವತಿ: ಕೊಪ್ಪಳ ಜಿಲ್ಲೆಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳಿಗೆ ಸಮರ್ಥ ಮುಖಂಡರಿಲ್ಲ ಎಂದು ಬಿಜೆಪಿಯ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಲೇವಡಿ ಮಾಡಿದರು.

ಲೋಕಸಭಾ ಚುನಾವಣೆ ಅಂಗವಾಗಿ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಮಾಜಿ ಸಚಿವ ಡಿಸಿಸಿ ಜಿಲ್ಲಾ ಅಧ್ಯಕ್ಷ ಶಿವರಾಜ ತಂಗಡಗಿ ಮತ್ತು ಮಾಜಿ ಸಚಿವ ಇಕ್ಬಾಲ್ ಅನ್ಸಾರಿಯವರು ಮೂಲ ಯಾವುದು ಎಂದು ಅವರು ಪ್ರಶ್ನಿಸಿದರು. ಈರ್ವರು ಅವಕಾಶವಾದಿ ರಾಜಕಾರಣಿಗಳಾಗಿದ್ದಾರೆ. ಅನ್ಸಾರಿಯವರು ಬಿಜೆಪಿ, ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳು ಈ ಚುನಾವಣೆಯಲ್ಲಿ ಮುಸ್ಲಿಂ ಧರ್ಮದವರಿಗೆ ಪ್ರಾತಿನಿಧ್ಯ ನೀಡಿಲ್ಲ ಎಂದು ಹೇಳಿದರುವದು ಬಾಲಿಷತನವಾಗಿದೆ. ಈ ಹೇಳಿಗೆ ಮುಸ್ಲಿಂ ಸಮುದಾಯವನ್ನು ಓಲೈಸುವದಾಗಿದೆ ಎಂದು ಅವರು ತಿಳಿಸಿದರು. ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳು ಮುಸ್ಲಿಂ ಜನಾಂಗವನ್ನು ತುಷ್ಟಿÃಕರಣ ಮಾಡಿದ ಕಾರಣದಿಂದ ಆ ಪಕ್ಷಗಳು ಮೂಲೆ ಗುಂಪಾಗಿವೆ. ಲೋಕಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ೨೦ ರಿಂದ ೨೫ ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ. ಬಿಜೆಪಿ ಎಲ್ಲ ಧರ್ಮಗಳ ಪಕ್ಷವಾಗಿರುವ ಕಾರಣದಿಂದ ಮತ್ತೊಮ್ಮೆ ನರೇಂದ್ರ ಮೋದಿಯವರು ದೇಶದ ಪ್ರಧಾನ ಮಂತ್ರಿಗಳಾಗಲಿದ್ದಾರೆ ಎಂದು ಅವರು ತಿಳಿಸಿದರು.
ಡಿಸಿಸಿ ಅಧ್ಯಕ್ಷ ಶಿವರಾಜ ತಂಗಡಗಿ ಕನಕಗಿರಿ ವಿಧಾನಸಭಾ ಚುನಾವಣೆ ಜಾತಿ ರಾಜಕಾರಣ ಮಾಡಿದ ಪರಿಣಾಮದಿಂದ ಸೋಲನ್ನು ಕಂಡಿದ್ದಾರೆ. ಗೆಲುವು ಸಾಧಿಸಿರುವ ಬಿಜೆಪಿ ಶಾಸಕ ಬಸವರಾಜ ದಢೇಸೂಗೂರು ಅವರಿಗೆ ಅಭಿವೃದ್ದಿ ಕಾರ್ಯಗಳಲ್ಲಿ ಕೈ ಜೋಡಿಸುವದು ಬಿಟ್ಟು ಅವರು ಸೋತ ಹತಾಶೆಯಲ್ಲಿ ವಿನಾಕಾರಣ ಶಾಸಕರನ್ನು ಟೀಕೆ ಮಾಡುತ್ತಿರುವದು ಸರಿಯಲ್ಲ ಎಂದು ತಿಳಿಸಿದರು.

ಕುಮಾರಸ್ವಾಮಿ ರಾಜೀನಾಮೆ ನೀಡಬೇಕು: ಗೌಪ್ಯತೆಯನ್ನು ಕಾಪಾಡುವದು ಮುಖ್ಯಮಂತ್ರಿಗಳ ಕರ್ತವ್ಯವಾಗಿದೆ. ಇತ್ತಿÃಚೆಗೆ ರಾಜ್ಯದಲ್ಲಿ ನಡೆದ ಆದಾಯ ತೆರಿಗೆ ಅಧಿಕಾರಿಗಳ ದಾಳಿಯನ್ನು ಒಂದು ಮುಂಚಿತವಾಗಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಬಹಿರಂಗ ಪಡಿಸಿದ್ದು ಗೌಪ್ಯತೆಯನ್ನು ಉಲ್ಲಂಘನೆ ಮಾಡಿದಂತಾಗಿದೆ. ಕಾರಣ ಇವರು ತಮ್ಮ ಸ್ಥಾನಕ್ಕೆ ತಕ್ಷಣ ರಾಜೀನಾಮೆ ನೀಡಬೇಕು. ರಾಜೀನಾಮೆ ನೀಡದಿದ್ದರೆ ರಾಜ್ಯಪಾಲರು ಅವರನ್ನು ವಜಾ ಮಾಡಬೇಕು ಎಂದು ಈಶ್ವರಪ್ಪ ಒತ್ತಾಯಿಸಿದರು.
ಬಲಿಷ್ಠ ಪ್ರಧಾನಿ: ಕಳೆದ ೭೦ ವರ್ಷಗಳಲ್ಲಿ ನರೇಂದ್ರ ಮೋದಿಯವರು ದೇಶ ಕಂಡ ಬಲಿಷ್ಠ ಪ್ರಧಾನ ಮಂತ್ರಿಗಳಾಗಿದ್ದಾರೆ. ಅಭಿವೃದ್ದಿಗೆ ಇನ್ನೊಂದು ಹೆಸರು ಮೋದಿ. ದೇಶದಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣೆ ಹಿಡಿದರೆ ಹಿಂದು, ಮುಸ್ಲಿಂ ಮತ್ತು ಕ್ರಿಶ್ಚಿಯನ್ ಧರ್ಮಗಳಲ್ಲಿ ರಕ್ತಕ್ರಾಂತಿ ಯಾಗುತ್ತದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲಗಾಂಧಿಯವರು ಹಸಿ ಸುಳ್ಳನ್ನು ಹೇಳುತ್ತಿದ್ದಾರೆ. ಮೋದಿಯವರು ಪ್ರಧಾನಿಯಾದ ನಂತರ ಮುಸ್ಲಿಂ ಮತ್ತು ಕ್ರಿಶ್ಚಿಯನ್ ಆಡಳಿತ ಇರುವ ವಿದೇಶಗಳಿಗೆ ಭೇಟಿ ನೀಡಿ ಉತ್ತಮ ಬಾಂಧವ್ಯ ಉಂಟು ಮಾಡಿದ್ದಾರೆ. ಕಾಂಗ್ರೆಸ್ ಪಕ್ಷ ಮುಸ್ಲಿಂ ಜನಾಂಗದ ಓಲೈಕೆ ಮಾಡಿರುವ ಪರಿಣಾಮದಿಂದ ಇಂದು ಆ ಪಕ್ಷ ಅಧೋಗತಿಗೆ ತಲುಪಿದೆ ಎಂದು ತಿಳಿಸಿದರು.

ದುರ್ಬಲ ವರ್ಗದವರಿಗೆ, ರೈತರಿಗೆ, ನಿರುದ್ಯೊÃಗಿ ಯುವಕರಿಗೆ ಅನೇಕ ಯೋಜನೆಗಳನ್ನು ಅನುಷ್ಠಾನಗೊಳಿಸುವ ಮೂಲಕ ವಿದೇಶಿಗರು ಮೆಚ್ಚುವ ಕೆಲಸ ಮಾಡಿದ್ದಾರೆ. ರಾಷ್ಟçದ ಸುಭದ್ರತೆ, ಭಯೋತ್ಪಾದನೆ ನಿರ್ಮೂಲನೆ, ನಕ್ಸಲ್ ಹಟ್ಟಹಾಸ ಕಡಿವಾಣ ಹಾಕಿದ್ದಾರೆ. ಈ ಕಾರಣಕ್ಕೆ ದೇಶದ ಮತದಾರ ಮತ್ತೊಮ್ಮೆ ಮೋದಿ ಎನ್ನುತ್ತಿದ್ದಾರೆ ಎಂದು ತಿಳಿಸಿದರು.
ರಾಜ್ಯದಲ್ಲಿ ಈ ಚುನಾವಣೆಯನ್ನು ಸಂಘಟನೆ, ರಾಷ್ಟಿçÃಯ ವಿಚಾರಗಳು, ಪ್ರಪಂಚ ಮೆಚ್ಚಿದ ಪ್ರಧಾನಿ ಮೋದಿ ಎಂಬ ವಿಷಯಗಳನ್ನು ಮುಂದಿಟ್ಟುಕೊಂಡು ಚುನಾವಣೆ ಎದುರಿಸುತ್ತೆÃವೆ ಎಂದು ತಿಳಿಸಿದರು. ಬಿಜೆಪಿ ಜಿಲ್ಲಾ ಅಧ್ಯಕ್ಷ ಸಿಂಗನಾಳ ವಿರುಪಾಕ್ಷಪ್ಪ, ಶಾಸಕ ಪರಣ್ಣ ಮುನವಳ್ಳಿ, ನಗರ ಮಂಡಲ ಅಧ್ಯಕ್ಷ ವೀರೇಶ ಬಲಕುಂದಿ ಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು.

loading...