ತಾಲೂಕಿನ ಸಮಸ್ಯೆಗಳಿಗೆ ಅಧಿಕಾರಿಗಳು ಸ್ಪಂದಿಸಬೇಕು: ಡಿ.ಸಿ ಸೂಚನೆ

0
95

ಇಂಡಿ: ತಾಲೂಕಿನ ಎಲ್ಲ ಇಲಾಖೆಯ ಅಧಿಕಾರಿಗಳು ಇಲ್ಲನ ಹಲವಾರು ಸಮಸ್ಯಗಳಿದ್ದು ಆ ಸಮಸ್ಯೆಗಳಿಗೆ ಕೂಡಲೇ ಸ್ಪಂದಿಸಬೇಕು ಇಲ್ಲವಾದಲ್ಲಿ ಅಂತವರ ವಿರುಧ್ಧ ಕಠಿಣ ಕ್ರಮಕೈಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಸ್‌.ಬಿ.ಶೆಟ್ಟಣ್ಣನವರ ಎಚ್ಚರಿಕೆ ನೀಡಿದರು.
ಅವರು ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಆವರಣದಲ್ಲಿರುವ ಗುರುಭವನದಲ್ಲಿ ಹಮ್ಮಿಕೊಂಡಿರುವ ತಾಲೂಕು ಆಡಳಿತ ಹಾಗೂ ವಿಜಯಪುರ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿ ಇವರ ಸಂಯುಕ್ತಾಶ್ರಯದಲ್ಲಿ ಬುಧವಾರ ನಡೆದ ತಾಲೂಕು ಮಟ್ಟದ ಜನಸಂಪರ್ಕ ಸಭೆಯ ಅಧ್ಯಕ್ಷತೆಯನ್ನುವಹಿಸಿ ಮಾತನಾಡಿದರು.
ಈಗಾಗಲೇ ವಿಜಯಪುರ ಜಿಲ್ಲೆಯು ಬರಗಾಲಕ್ಕೆ ತುತ್ತಾಗಿದೆ ಇದಕ್ಕೆ ಸಂಬಂಧಿಸಿದ ಪೂರಕವಾಗಿ ಎಲ್ಲ ಅಧಿಕಾರಿಗಳು ಸರಿಯಾಗಿ ವಿವರವಾಗಿ ದಾಖಲೆಗಳನ್ನು ಸಲ್ಲಿಸಬೇಕು. ಅಲ್ಲದೇ ತಾಲೂಕಿನ ಯಾವುದೇ ಇಲಾಖೆಗೆ ರೈತರು ಹಾಗೂ ನಾಗರಿಕರು ಯಾವುದೇ ಮಾಹಿತಿಗಾಗಿ ಬಂದರೆ ಅವರ ಸಮಸ್ಯೆಗಳಿಗೆ ಅಧಿಕಾರಿಗಳು ಕೂಡಲೇ ಸ್ಪಂದನೆ ಮಾಡುವ ಕಾರ್ಯ ಮಾಡಬೇಕು. ಒಂದು ವೇಳೆ ಮತ್ತೋಮ್ಮೆ ನನಗೆ ಈರೀತಿಯಾಗಿ ಏನಾದರೂ ಸಮಸ್ಯೆಗಳನ್ನು ಪರಿಹಾರ ನೀಡದಿದ್ದರೆ ಅಂತಹ ಅಧಿಕಾರಿಗಳಿಗೆ ನಾನು ತಕ್ಕ ಪಾಠವನ್ನು ಕಲಿಸಲಿದ್ದೇನೆ ಎಂದು ಖಡಕ ಎಚ್ಚರಿಕೆ ನೀಡಿದರು.

ವೇದಿಕೆಯಲ್ಲಿ ಕಂದಾಯ ಉಪವಿಭಾಗಾಧಿಕಾರಿ ಪಿ.ರಾಜ ಹಾಗೂ ತಹಸೀಲ್ದಾರ ಸಂತೋಷ ಮ್ಯಾಗೇರಿ, ಇನಾಮದಾರ ತಾಲೂಕಿನ ಎಲ್ಲ ಅಧಿಕಾರಿಗಳು ಪ್ರಗತಿಪರ ರೈತ ಎಸ್‌.ಟಿ. ಪಾಟೀಲ ಹಾಗೂ ತಾಲೂಕಿನ ನೂರಾರು ರೈತರು ಹಾಗೂ ನಾಗರಿಕರು ಭಾಗವಹಿಸಿದ್ದರು.

loading...