ತುರ್ತು ಪರಿಸ್ಥಿತಿ ನಿರ್ವಹಣೆಗೆ ಸಿದ್ಧತೆ ಮಾಡಿಕೊಳ್ಳಿ: ಡಿಸಿ ಹಿರೇಮಠ – ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ

0
47

ಬೆಳಗಾವಿ
ಗ್ರಾಮ ಪಂಚಾಯತಿ ಮಟ್ಟದಲ್ಲಿ ವಿಪತ್ತು ನಿರ್ವಹಣಾ ಸಮಿತಿ ರಚಿಸಿದರೆ ತುರ್ತು ಸಂದರ್ಭದಲ್ಲಿ ಪರಿಸ್ಥಿತಿ ನಿರ್ವಹಣೆಗೆ ಅನುಕೂಲವಾಗುತ್ತದೆ. ಆದ್ದರಿಂದ ಮೂರು ದಿನಗಳಲ್ಲಿ ಸಮಿತಿಗಳನ್ನು ರಚಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಹಿರೇಮಠ ತಿಳಿಸಿದರು.
ಮಂಗಳವಾರ ಜಿಲ್ಲಾಧಿಕಾರಿ ಕಚೇಯ ಸಭಾಂಗಣದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಳೆಗಾಲ ಆರಂಭಗೊAಡಿರುವುದರಿAದ ಪ್ರವಾಹ, ಅತಿವೃಷ್ಟಿ ಸೇರಿದಂತೆ ಎಲ್ಲ ಬಗೆಯ ತುರ್ತು ಸಂದರ್ಭಗಳ ನಿರ್ವಹಣೆಗೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಗ್ರಾಪಂ ಮಟ್ಟದಲ್ಲಿ ಸಮಿತಿ ರಚನೆಯನ್ನು ಮಾಡಿದ ಬಳಿಕ ಜಿಲ್ಲಾಡಳಿತಕ್ಕೆ ವರದಿಯನ್ನು ಸಲ್ಲಿಸಿ ದೃಢೀಕರಿಸಬೇಕು. ಒಂದು ಲಕ್ಷ ಕ್ಯೂಸೆಕ್ ಹರಿವು ಬಂದರೆ ನೀರು ನುಗ್ಗುವಂತಹ ತೋಟದ ಮನೆಗಳು ಮತ್ತು ಗ್ರಾಮಗಳ ಪಟ್ಟಿ ತಯಾರಿಸಬೇಕು.
ಕೃಷ್ಣೆಯಲ್ಲಿ ಎರಡು ಲಕ್ಷ ಕ್ಯೂಸೆಕ್ ಮೀರಿದರೆ ಮಾಂಜರಿ, ಯಡೂರು, ಹಿಂಗಳಿ, ಚಂದೂರ, ಚಂದೂರ ಟೇಕ್ ಸೇರಿದಂತೆ ಏಳು ಗ್ರಾಮಗಳ ಮುಳುಗಡೆಯಾಗುತ್ತದೆ. ಆದ್ದರಿಂದ ಈ ಸಂದರ್ಭದಲ್ಲಿ ತೆಗೆದುಕೊಳ್ಳಬಹುದಾದ ಕ್ರಮಗಳ ಕುರಿತು ಯೋಜನೆ ರೂಪಿಸಲಾಗುತ್ತಿದೆ. ಮಹಾರಾಷ್ಟ್ರದ ಜಲಾಶಯಗಳು ಶೇ.೯೦ ಭರ್ತಿಯಾದಾಗ ಹಂತ ಹಂತವಾಗಿ ನೀರು ಬಿಡುಗಡೆ ಮಾಡಿದರೆ ಪ್ರವಾಹ ಸ್ಥಿತಿ ತಡೆಗಟ್ಟಬಹುದಾದರೆ ಈ ಬಗ್ಗೆ ಸಂಬAಧಿಸಿದ ಅಧಿಕಾರಿಗಳ ಜತೆ ಮುಂಚಿತವಾಗಿ ಚರ್ಚಿಸಿ ಪರಿಸ್ಥಿತಿ ನಿರ್ವಹಣೆಗೆ ಪ್ರಯತ್ನಿಸಲಾಗುವುದು. ಖಾನಾಪುರ ಭಾಗದಲ್ಲಿ ಜಾಸ್ತಿ ಮಳೆಯಾದಾಗ ತಕ್ಷಣ ನವೀಲುತೀರ್ಥ ಜಲಾಶಯದ ನೀರಿನ ಪ್ರಮಾಣ ನಿರ್ವಹಣೆ ಕುರಿತು ಎಚ್ಚರಿಕೆ ವಹಿಸಬೇಕು ಎಂದರು.
———————–
ಪರಿಹಾರ ಕೇಂದ್ರ ಸಿದ್ಧತೆಗೆ ಸೂಚನೆ:

ಪ್ರವಾಹ ಸಂದರ್ಭದಲ್ಲಿ ಈ ಬಾರಿ ಪರಿಹಾರ ಕೇಂದ್ರ ಆರಂಭಿಸುವಾಗ ಸಮುದಾಯ ಭವನದ ಬದಲು ಶಾಲೆಗಳನ್ನು ಆಯ್ಕೆ ಮಾಡಿಕೊಳ್ಳಲು ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಅಲ್ಲಿ ಶೌಚಾಲಯ ಮತ್ತಿತರ ಮೂಲಸೌಕರ್ಯಗಳನ್ನು ಒದಗಿಸಲು ಸಾಧ್ಯವಾಗುತ್ತದೆ. ಅದೇ ರೀತಿ ಪರಿಹಾರ ಕೇಂದ್ರಗಳಿಗೆ ನೋಡಲ್ ಅಧಿಕಾರಿ ಮತ್ತು ಸಿಬ್ಬಂದಿ ನಿಯೋಜನೆಗೆ ಪಟ್ಟಿ ಸಿದ್ಧಪಡಿಸಬೇಕು. ಸರ್ಕಾರಿ ವಾಹನಗಳ ಬಳಕೆ ಮತ್ತು ತುರ್ತು ಸಂದರ್ಭದಲ್ಲಿ ಖಾಸಗಿ ವಾಹನಗಳನ್ನು ಪಡೆಯುವ ಬಗ್ಗೆ ಮುಂಚಿತವಾಗಿ ಪಟ್ಟಿ ಮಾಡಬೇಕು. ಪರಿಹಾರ ಕೇಂದ್ರಗಳಿಗೆ ಆಹಾರ ಪದಾರ್ಥಗಳನ್ನು ಒದಗಿಸುವುದಕ್ಕೆ ಸಂಬAಧಿಸಿದAತೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳ ಪಟ್ಟಿ ಸಿದ್ಧವಾಗಿಟ್ಟುಕೊಳ್ಳಬೇಕು.
———————————–
ಬೋಟ್‌ಗಳ ಸಮಗ್ರ ಮಾಹಿತಿ:
ಜಿಲ್ಲೆಯಲ್ಲಿ ಸದ್ಯಕ್ಕೆ ಲಭ್ಯವಿರುವ ಬೋಟ್ ಗಳು ಸುಸಜ್ಜಿತವಾಗಿರುವ ಬಗ್ಗೆ ಪ್ರಮಾಣಪತ್ರ ಪಡೆದುಕೊಳ್ಳಬೇಕು. ಇನ್ನೂ ಹೆಚ್ಚಿಗೆ ಅಗತ್ಯವಿರುವ ಬೋಟ್ ಗಳನ್ನು ಖರೀದಿಸಲು ಅಥವಾ ತುರ್ತು ಸಂದರ್ಭದಲ್ಲಿ ಪಡೆಯಲು ಸಂಬAಧಿಸಿದ ಸಂಸ್ಥೆಯ ಬಗ್ಗೆ ಮುಂಚಿತವಾಗಿಯೇ ಮಾಹಿತಿಯನ್ನು ಸಿದ್ಧವಾಗಿಟ್ಟುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಸೂಚನೆ ನೀಡಿದರು.
ಜಾನುವಾರು ಕೇಂದ್ರಗಳ ಸ್ಥಾಪನೆಗೆ ಪಟ್ಟಿ ಸಿದ್ಧಪಡಿಸಬೇಕು ಮತ್ತು ಕೂಡಲೇ ಅವುಗಳಿಗೆ ಮೇವು ಪೂರೈಸಲು ಅನುಕೂಲವಾಗುವಂತೆ ಮುನ್ನೆಚ್ಚರಿಕೆ ವಹಿಸಬೇಕು.ಪರಿಹಾರ ಕೇಂದ್ರಗಳ ಪಕ್ಕದಲ್ಲೇ ಜಾನುವಾರು ಕೇಂದ್ರಗಳನ್ನು ಆರಂಭಿಸಲು ಕ್ರಮಕೈಗೊಳ್ಳಬೇಕು ಎಂದರು.
—————————-
ಕೋವಿಡ್ ವರದಿ ವಿಳಂಬ; ನೋಟಿಸ್ ನೀಡಲು ಸೂಚನೆ:

ಕೋವಿಡ್-೧೯ ಗೆ ಸಂಬAಧಿಸಿದAತೆ ಗಂಟಲುದ್ರವ ಮಾದರಿ ಸಂಗ್ರಹಿಸಿ ಅದನ್ನು ಪ್ರಯೋಗಾಲಯಕ್ಕೆ ಕಳಿಸುವುದು ಕೆಲವು ಕಡೆ ತಡವಾಗುತ್ತಿರುವುದರಿಂದ ವರದಿ ಕೂಡ ವಿಳಂಬವಾಗುತ್ತಿದೆ. ಆದ್ದರಿಂದ ಸಂಗ್ರಹಿತ ಮಾದರಿಯನ್ನು ತಕ್ಷಣವೇ ಪ್ರಯೋಗಾಲಯಕ್ಕೆ ಕಳಿಸಲು ಕ್ರಮ ತೆಗೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಹಿರೇಮಠ ತಿಳಿಸಿದರು.

ಮಾದರಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳಿಸಲು ವಿಳಂಬ ಮಾಡುವ ತಾಲ್ಲೂಕು ಆರೋಗ್ಯಾಧಿಕಾರಿಗಳಿಗೆ ನೋಟಿಸ್ ನೀಡಬೇಕು ಎಂದು ಜಿಲ್ಲಾಧಿಕಾರಿ ಹಿರೇಮಠ ಸೂಚನೆ ನೀಡಿದರು.

ಕೋವಿಡ್-೧೯ ನಿಯಂತ್ರಣ ಈಗಾಗಲೇ ತಾಲ್ಲೂಕು ಮಟ್ಟದಲ್ಲಿ ಕೋವಿಡ್ ಕೇರ್ ಸೆಂಟರ್ ಸ್ಥಾಪಿಸಲಾಗಿದೆ. ಅವು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಹೇಳಿದರು.
ಎಡಿಸಿ ಅಶೋಕ ದುಡಗುಂಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ವಿ.ಮುನ್ಯಾಳ, ನೀರಾವರಿ ಇಲಾಖೆಯ ಎಂಜಿನಿಯರ್ ಆರ್. ಬಿ.ಧಾಮಣ್ಣವರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪ ನಿರ್ದೇಶಕ ಗುರುನಾಥ ಕಡಬೂರ ಸೇರಿದಂತೆ ನೀರಾವರಿ, ಪೊಲೀಸ್ ಹಾಗೂ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

loading...