ದಸರಾ ಗಜಪಯಣಕ್ಕೆ ಅದ್ಧೂರಿ ಚಾಲನೆ

0
24

ಬೆಂಗಳೂರು: ವಿಶ್ವವಿಖ್ಯಾತ ದಸರಾ ಮಹೋತ್ಸವದ ಮುನ್ನಡೆಯಾದ ಕ್ಯಾಪ್ಟನ್ ಅರ್ಜುನ ನೇತೃತ್ವದ ಗಜಪಯಣಕ್ಕೆ ಭಾನುವಾರ ಅದ್ಧೂರಿ ಚಾಲನೆ ದೊರೆಯಿತು.
ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ನಾಗರಹೊಳೆ ರಾಷ್ಟಿçÃಯ ಉದ್ಯಾನವನದ ವೀರನಹೊಸಳ್ಳಿ ಗೇಟ್ ಮುಂಭಾಗ ಕ್ಯಾಪ್ಟನ್ ಅರ್ಜುನ, ವರಲಕ್ಷ್ಮಿ, ಚೈತ್ರ, ಗೋಪಿ, ವಿಕ್ರಮ, ಧನಂಜಯ ಆನೆಗಳಿಗೆ ಸಾಂಪ್ರದಾಯಿಕವಾಗಿ ಅಲಂಕಾರ ಹಾಗೂ ವಿಶೇಷ ಪೂಜೆ ಸಲ್ಲಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ. ದೇವೇಗೌಡ ಹಾಗೂ ರಾಜಕೀಯ ಗಣ್ಯರು ಆನೆಗಳಿಗೆ ಪುಷ್ಪಾರ್ಚನೆ ಮಾಡಿ ಗಜಪಯಣಕ್ಕೆ ಚಾಲನೆ ನೀಡಿದರು.
ವೀರನಹೊಸಳ್ಳಿ ಗೇಟ್ ಮುಂಭಾಗ ಡೊಳ್ಳು ಕುಣಿತ, ಸೋಮನ ಕುಣಿತ, ವಿವಿಧ ಜಾನಪದ ಕಲಾತಂಡಗಳು ಆಕರ್ಷಕವಾಗಿ ನೃತ್ಯ ಮಾಡುತ್ತ ಗಜಪಯಣಕ್ಕೆ ಮತ್ತಷ್ಟು ಮೆರಗು ನೀಡಿದವು.
ಸಚಿವ ಸಾ ರಾ ಮಹೇಶ್ ಶಾಸಕರಾದ ಹೆಚ್ ವಿಶ್ವನಾಥ್, ತನ್ವಿÃರ್ ಸೇಠ್, ಅನಿಲ್ ಚಿಕ್ಕಮಾದು, ಅಶ್ವಿನಿಕುಮಾರ್, ಕೆ ಮಹದೇವು , ಜಿಲ್ಲಾಧಿಕಾರಿ ಅಭಿರಾಮ್ ಜಿ ಶಂಕರ್, ನಾಗರಹೊಳೆ ರಾಷ್ಟಿçÃಯ ಉದ್ಯಾನವನದ ನಿರ್ದೇಶಕ ಜಿ. ರವಿಶಂಕರ್, ಮೈಸೂರಿನ ಡಿಸಿಎಫ್ ಸಿದ್ದರಾಮಪ್ಪ ಸೇರಿದಂತೆ ರಾಜಕೀಯ ಮುಖಂಡರು ಹಾಗೂ ಅಧಿಕಾರಿ ವೃಂದ ಭಾಗಿಯಾಗಿದ್ದರು.

loading...