ಧಾರವಾಡ ಜಿಪಂ ಸದಸ್ಯ ಕೊಲೆ ಪ್ರಕರಣಕ್ಕೆ ಟ್ವಿಸ್ಟ್: ಬಂಧನ ಭೀತಿಯಲ್ಲಿ ಬೆಳಗಾವಿಯಲ್ಲಿ ಕಾರ್ಯನಿರ್ವಹಿಸಿದ ಪೊಲೀಸ್ ಅಧಿಕಾರಿ

0
448

ಬೆಳಗಾವಿ
ಧಾರವಾಡ ಜಿಪಂ ಸದಸ್ಯ ಯೋಗೇಶಗೌಡ ಕೊಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದ್ದು ಮಾಜಿ ಸಚಿವ ವಿನಯ ಕುಲಕರ್ಣಿ ಸಹೋದರ ವಿಜಯ ಕುಲಕರ್ಣಿ ಇಂದು ಸಿಬಿಐ ಮುಂದೆ ವಿಚಾರಣೆ ಎದುರಿಸಲಿದ್ದಾರೆ. ಅಲ್ಲದೆ ಬೆಳಗಾವಿ ನಗರ ಪೊಲೀಸ್ ಇಲಾಖೆಯಲ್ಲಿ ಸೇವೆ ಮಾಡಿದ್ದ ಸಿಪಿಐ ಒಬ್ಬರಿಗೂ ಈಗ ಬಂಧನದ ಭೀತಿ ಎದುರಾಗಿದೆ.
ಹೌದು. ಕಳೆದ 2016ರಲ್ಲಿ ಧಾರವಾಡ ನಗರದ ಸಪ್ತಾಪುರ ಬಳಿ ಇರುವ ಜಿಮ್ ಸೆಂಟರ್ ನಲ್ಲಿ ಜಿಪಂ ಸದಸ್ಯ ಯೋಗೇಶಗೌಡ ಕೊಲೆ ಪ್ರಕರಣಕ್ಕೆ ಮರುಜೀವ ಪಡೆದುಕೊಂಡಿದ್ದು, ಕೊಲೆ ಪ್ರಕರಣ ಮುಚ್ಚಿ ಹಾಕಲು ಯತ್ನ ನಡೆದಿರುವ ಆರೋಪದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಸಹೋದರ ವಿಜಯ ಕುಲಕರ್ಣಿ ಇಂದು ಸಿಬಿಐ ವಿಚಾರಣೆ ಎದುರಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಯೋಗೇಶಗೌಡ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಲು ಯತ್ನಿಸಿದ್ದ ಕೆಲ ಪೊಲೀಸ್ ಅಧಿಕಾರಿಗಳಿಗೂ ಸದ್ಯ ಬಂಧನದ ಭೀತಿ ಎದುರಾಗಿದ್ದು, ಬೆಂಗಳೂರು ಸಿಬಿಐ ಕಚೇರಿಗೆ ಬರುವಂತೆ ಮಾಜಿ ಸಚಿವ ವಿನಯ ಕುಲಕರ್ಣಿ ಸಹೋದರ ವಿಜಯ ಕುಲಕರ್ಣಿ ಅವರಿಗೆ ನೋಟಿಸ್ ನೀಡಲಾಗಿದೆ.
ಯೋಗೇಶಗೌಡ ಕೊಲೆ ಕೇವಲ ವೈಷಮ್ಯದಲ್ಲಿ ಅದು ಸುಪಾರಿ ಕೊಲೆ ಎಂದು ಸಿಬಿಐ ಶಂಕೆ ವ್ಯಕ್ತಪಡಿಸಿದೆ. ಅಲ್ಲದೆ ಈ ಪ್ರಕರಣದಲ್ಲಿ ಸ್ಥಳೀಯ ಪೊಲೀಸ್ ಅಧಿಕಾರಿಗಳು ಈ ಪ್ರಕರಣ ಮುಚ್ಚಿ ಹಾಕಲು ಯತ್ನ ನಡೆಸಿದ್ದರು ಎನ್ನಲಾಗುತ್ತಿದೆ. ಅಲ್ಲದೆ ಬೆಳಗಾವಿ ನಗರದ ಮಾಳಮಾರೋತಿ ಠಾಣೆಯಲ್ಲಿ ಸೇವೆ ಸಲ್ಲಿಸಿದ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿಯೂ ಸೇವೆ ಸಲ್ಲಿಸಿದ್ದ ಸಿಪಿಐ ಒಬ್ಬರಿಗೂ ಬಂಧನ ಭೀತಿ ಎದುರಾಗಿದೆ. ಕಾರಣ ಅವರು ಜಿಪಂ ಸದಸ್ಯ ಯೋಗೇಶಗೌಡ ಕೊಲೆ ಪ್ರಕರಣದಲ್ಲಿ ಪ್ರಮುಖ ತನಿಖಾಧಿಕಾರಿಯಾಗಿದ್ದರು.

ಒಟ್ಟಾರೆ ಧಾರವಾಡ ಜಿಪಂ ಸದಸ್ಯ ಯೋಗೇಶಗೌಡ ಕೊಲೆ ಪ್ರಕರಣಕ್ಕೆ ಮರುಜೀವ ಸಿಕ್ಕಿದ್ದು ಸಂಪೂರ್ಣ ತನಿಖೆಯ ವೇಳೆ ಸತ್ಯಾಸತ್ಯತೆ ತಿಳಿದು ಬರಲಿದೆ.

loading...