ಧಾರವಾಡ ಜಿಪಂ ಸದಸ್ಯ ಯೋಗೇಶಗೌಡ ಕೊಲೆ ಪ್ರಕರಣಕ್ಕೆ ಮರುಜೀವ

0
9

ಧಾರವಾಡ

 

ಧಾರವಾಡ

ಧಾರವಾಡ ಜಿಪಂ ಸದಸ್ಯ ಯೋಗೇಶಗೌಡ ಕೊಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದ್ದು ಮಾಜಿ ಸಚಿವ ವಿನಯ ಕುಲಕರ್ಣಿ ಸಹೋದರ ವಿಜಯ ಕುಲಕರ್ಣಿ ಇಂದು ಸಿಬಿಐ ಮುಂದೆ ವಿಚಾರಣೆ ಎದುರಿಸಲಿದ್ದಾರೆ.

ಹೌದು. ಕಳೆದ 2016ರಲ್ಲಿ ಧಾರವಾಡ ನಗರದ ಸಪ್ತಾಪುರ ಬಳಿ ಇರುವ ಜಿಮ್ ಸೆಂಟರ್ ನಲ್ಲಿ ಜಿಪಂ ಸದಸ್ಯ ಯೋಗೇಶಗೌಡ ಕೊಲೆ ಪ್ರಕರಣಕ್ಕೆ ಮರುಜೀವ ಪಡೆದುಕೊ‌ಂಡಿದ್ದು, ಕೊಲೆ ಪ್ರಕರಣ ಮುಚ್ಚಿ ಹಾಕಲು ಯತ್ನ ನಡೆದಿರುವ ಆರೋಪದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಸಹೋದರ ವಿಜಯ ಕುಲಕರ್ಣಿ ಇಂದು ಸಿಬಿಐ ವಿಚಾರಣೆ ಎದುರಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಯೋಗೇಶಗೌಡ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಲು ಯತ್ನಿಸಿದ್ದ ಕೆಲ ಪೊಲೀಸ್ ಅಧಿಕಾರಿಗಳಿಗೂ ಸದ್ಯ ಬಂಧನದ ಭೀತಿ ಎದುರಾಗಿದ್ದು, ಬೆಂಗಳೂರು ಸಿಬಿಐ ಕಚೇರಿಗೆ ಬರುವಂತೆ ಮಾಜಿ ಸಚಿವ ವಿನಯ ಕುಲಕರ್ಣಿ ಸಹೋದರ ವಿಜಯ ಕುಲಕರ್ಣಿ ಅವರಿಗೆ ನೋಟಿಸ್ ನೀಡಲಾಗಿದೆ.

ಯೋಗೇಶಗೌಡ ಕೊಲೆ ಕೇವಲ ವೈಷಮ್ಯದಲ್ಲಿ ಅದು ಸುಪಾರಿ ಕೊಲೆ ಎಂದು ಸಿಬಿಐ ಶಂಕೆ ವ್ಯಕ್ತಪಡಿಸಿದೆ‌. ಅಲ್ಲದೆ ಈ ಪ್ರಕರಣದಲ್ಲಿ ಸ್ಥಳೀಯ ಪೊಲೀಸ್ ಅಧಿಕಾರಿಗಳು ಈ ಪ್ರಕರಣ ಮುಚ್ಚಿ ಹಾಕಲು ಯತ್ನ ನಡೆಸಿದ್ದರು ಎನ್ನಲಾಗುತ್ತಿದೆ. ಒಟ್ಟಾರೆ ಧಾರವಾಡ ಜಿಪಂ ಸದಸ್ಯ ಯೋಗೇಶಗೌಡ ಕೊಲೆ ಪ್ರಕರಣಕ್ಕೆ ಮರುಜೀವ ಸಿಕ್ಕಿದ್ದು ಸಂಪೂರ್ಣ ತನಿಖೆಯ ವೇಳೆ ಸತ್ಯಾಸತ್ಯತೆ ತಿಳಿದು ಬರಲಿದೆ.

loading...