ನಾಳೆ ಮಾಸ್ಕ್ ದಿನ ಆಚರಣೆ: ಸರ್ಕಾರದಿಂದ ಆದೇಶ

0
7
ಟೈಟಾನಿಕ ಸಂದೇಶ : ಮಾಸ್ಕ ಡೇ ನಿಮಿತ್ಯ ಅಂತರ ಕಡ್ಡಾಯ

ಬೆಂಗಳೂರು:- ಗುರುವಾರ ಮಾಸ್ಕ್‌ ದಿನವನ್ನಾಗಿ ಆಚರಿಸಲು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.ಜೂನ್ 18ರಂದು ಪಾದಯಾತ್ರೆ ಕೈಗೊಂಡು ಮಾಸ್ಕ್ ದಿನ ಆಚರಿಸಿ ಜನಜಾಗೃತಿ ಮೂಡಿಸಬೇಕು ಎಂದು ರಾಜ್ಯ ಸರ್ಕಾರ್ದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಆದೇಶದಲ್ಲಿ ತಿಳಿಸಿದ್ದಾರೆ.

ಸ್ಥಳೀಯ ಸಂಸ್ಥೆಗಳು, ಮಹಾನಗರ ಪಾಲಿಕೆ, ನಗರ ಸಭೆ, ಜಿಲ್ಲಾ ಪಂಚಾಯತ್‌ ಹಾಗೂ ಜಿಲ್ಲಾಡಳಿತ ವತಿಯಿಂದ ಮಾಸ್ಕ್ ಡೇ ಆಚರಿಸುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಆದೇಶದಲ್ಲಿ ತಿಳಿಸಿದ್ದಾರೆ.
ಕೋವಿಡ್-19 ಸೋಂಕು ನಿಯಂತ್ರಿಸಲು ರಾಷ್ಟ್ರೀಯ ನಿರ್ದೇಶನಗಳನ್ನು ಪಾಲಿಸುವುದು ಕಡ್ಡಾಯ. ಈ ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ಮುಖಗವಸು ಧರಿಸುವುದು, ಸೋಪಿನಿಂದ ಕೈ ತೊಳೆಯುವುದು, ಸ್ಯಾನಿಟೈಸರ್ ಬಳಕೆ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅತಿ ಪ್ರಮುಖವಾದ ವೈದ್ಯಕೀಯೇತರ ಪಾಲನೆಯಾಗಿದೆ.
ಈ ಕುರಿತು ಜನ ಸಮುದಾಯದಲ್ಲಿ ಹೆಚ್ಚಿನ ಜಾಗೃತಿ ಮೂಡಿಸಲು ರಾಜ್ಯ ಸರ್ಕಾರ ಜೂನ್ 18ರಂದು ಗುರುವಾರ ಮಾಸ್ಕ್ ದಿನವನ್ನಾಗಿ ಘೋಷಿಸಲು ನಿರ್ಧರಿಸಿದೆ.
ಅಂದು ಜಿಲ್ಲಾ ಮತ್ತು ತಾಲೂಕು ಆಡಳಿತವು ಚುನಾಯಿತ ಪ್ರತಿನಿಧಿಗಳು, ಗಣ್ಯ ವ್ಯಕ್ತಿಗಳು, ವೈದ್ಯಕೀಯ ಸಿಬ್ಬಂದಿಗಳೊಂದಿಗೆ ಪಾದಯಾತ್ರೆ ಮೂಲಕ ಜನಜಾಗೃತಿ ಮೂಡಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಜಿಲ್ಲಾ, ತಾಲೂಕು, ಕಾರ್ಪೋರೇಷನ್, ಪಂಚಾಯತ್, ಕಂದಾಯ ವ್ಯಾಪ್ತಿಯ ವಾರ್ಡ್‌ಗಳಲ್ಲಿ ಜಿಲ್ಲಾಡಳಿತ ಕೋವಿಡ್‌-19 ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ರಾಷ್ಟ್ರೀಯ ನಿರ್ದೇಶನಗಳನ್ನು ಪಾಲಿಸುವಲ್ಲಿ ಜಾಗೃತಿ ಮೂಡಿಸಲು ಪಾದಯಾತ್ರೆಗಳನ್ನು ಕೈಗೊಳ್ಳಬೇಕು.
ಜನಜಾಗೃತಿ ಮೂಡಿಸುವ ಈ ಪಾದಯಾತ್ರೆಯಲ್ಲಿ 50 ಜನರಿಗಿಂತ ಹೆಚ್ಚು ಮಂದಿ ಒಂದು ನಿರ್ದಿಷ್ಟ ಪ್ರದೇಶದಲ್ಲಿ ಭಾಗವಹಿಸಬಾರದು. ಪಾದಯಾತ್ರೆಯಲ್ಲಿ ಭಾಗವಹಿಸುವಂತಹವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸಾಮಾಜಿಕ ಅಂತರವನ್ನು ಕಡ್ಡಾಯವಗಿ ಕಾಯ್ದುಕೊಳ್ಳುವ ಮೂಲಕ ಸಮಾಜಕ್ಕೆ ಮಾದರಿಯಾಗಬೇಕು.
ಜನ ಜಾಗೃತಿ ಪಾದಯಾತ್ರೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಲ್ಳುವಿಕೆ, ಮಾಸ್ಕ್, ಧರಿಸುವಿಕೆ, ಆಗಿಂದಾಗ್ಗೆ ಸೋಪಿನಿಂದ ಕೈ ತೊಳೆಯುವಿಕೆ ಮತ್ತು ಸ್ಯಾನಿಟೈಸರ್ ಬಳಸುವಿಕೆಯಿಂದ ಆಗುವ ಉಪಯುಕ್ತತೆಯ ಅರಿವನ್ನು ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸುವುದ, ಪರಿಣಾಮಕಾರಿ ಸಂವಹಕ್ಕಾಗಿ ಫಲಕಗಳನ್ನು ಬಳಸಬೇಕು ಎಂದು ವಿಜಯಭಾಸ್ಕರ್ ಆದೇಶದಲ್ಲಿ ತಿಳಿಸಿದ್ದಾರೆ.

loading...