ಪಾಕ್ ಹೇಳಿಕೆಯನ್ನು ತಳ್ಳಿಹಾಕಿದ ಭಾರತ

0
24
Pakistani (L) and Indian flags stand on a table during an Indian-Pakistan meeting on the Sir Creek region in New Delhi on June 18, 2012. Pakistan and India started two-day talks in New Delhi to resolve their maritime boundary dispute in the Sir Creek region. Sir Creek, which opens up into the Arabian Sea dividing the Kutch region of the Indian state of Gujarat with the Sindh province of Pakistan, is a 96-km strip of water that is disputed between India and Pakistan. AFP PHOTO / Prakash SINGH

ನ್ಯೂಯಾರ್ಕ್: ಕಾಶ್ಮೀರ ವಿವಾದವನ್ನು ಪದೇ ಪದೇ ವಿಶ್ವಸಂಸ್ಥೆಯಲ್ಲಿ ಪ್ರಸ್ತಾಪ ಮಾಡುತ್ತಿರುವ ಇಸ್ಲಾಮಿಕ್ ಸಹಕಾರ ಸಂಘಟನೆ (ಒಐಸಿ) ವಿರುದ್ಧ ಭಾರತ ತೀವ್ರವಾಗಿ ಕಿಡಿಕಾರಿದ್ದು, ಕಾಶ್ಮೀರ ವಿವಾದ ಭಾರತ ಆಂತರಿಕ ವಿಚಾರವಾಗಿದ್ದು, ನಮ್ಮ ಆಂತರಿಕ ವಿಚಾರದಲ್ಲಿ ಮೂಗು ತೋರಿಸುವ ಹಕ್ಕು ಒಐಸಿಗೆ ಇಲ್ಲ ಎಂದು ಶುಕ್ರವಾರ ಹೇಳಿದೆ.
ವಿಶ್ವಸಂಸ್ಥೆಯಲ್ಲಿ ಕಾಶ್ಮೀರ ವಿವಾದವನ್ನು ಪ್ರಸ್ತಾಪ ಮಾಡಿದ್ದ ಒಐಸಿ, ಭಾರತದ ವಿರುದ್ಧ ಆರೋಪ ಮಾಡಿತ್ತು. ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತ ಮಾನವ ಹಕ್ಕುಗಳನ್ನು ಉಲ್ಲಂಘನೆ ಮಾಡುತ್ತಿದ್ದು, ಕಾಶ್ಮೀರಿಗರ ಸ್ವಯಂ ನಿರ್ಣಯದ ಹಕ್ಕುಗಳನ್ನು ಕಿತ್ತುಕೊಳ್ಳುತ್ತಿದೆ ಎಂದು ಆರೋಪಿಸಿತ್ತು.
ಈ ಆರೋಪವನ್ನು ಭಾರತ ತಳ್ಳಿಹಾಕಿದ್ದು, ಒಐಸಿ ವಿರುದ್ಧ ತೀವ್ರವಾಗಿ ಕಿಡಿಕಾರಿದೆ. ಒಐಸಿ ಆರೋಪ ಕುರಿತಂತೆ ವಿಶ್ವಸಂಸ್ಥೆಯ ಕಚೇರಿಯಲ್ಲಿ ಭಾರತದ ರಾಯಭಾರಿಯಾಗಿರುವ ಸುಮಿತ್ ಸೇಠ್ ಅವರು ಮಾತನಾಡಿ, ಇಸ್ಲಾಮಿಕ್ ಸಹಕಾರ ಸಂಘಟನೆ ಪರವಾಗಿ ಪಾಕಿಸ್ತಾನ ಮಾಡುತ್ತಿರುವ ಆರೋಪಕ್ಕೆ ಉತ್ತರ ನೀಡುವ ಹಕ್ಕು ಭಾರತಕ್ಕಿದೆ. ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗ ಹಾಗೂ ಬೇರ್ಪಡಿಸಲಾಗದ ಭಾಗವಾಗಿದೆ. ಕಾಶ್ಮೀರ ವಿವಾದ ಭಾರತದ ಆಂತರಿಕ ವಿಚಾರವಾಗಿದ್ದು, ಈ ವಿಚಾರದಲ್ಲಿ ಒಐಸಿ ಮೂಗು ತೂರಿಸಬಾರದು. ಭವಿಷ್ಯದಲ್ಲಿ ಈ ಪ್ರಸ್ತಾಪವನ್ನು ಒಐಸಿ ಮಾಡಬಾರದೆಂದು ಸಲಹೆ ನೀಡುತ್ತೇವೆಂದು ಹೇಳಿದ್ದಾರೆ.

loading...