ಪೋಷಕರು ಮತ್ತು ಶಾಲಾ ಮುಖ್ಯೋಪಾದ್ಯಾಯರ ಗಮನಕ್ಕೆ

0
25

ಬೆಳಗಾವಿ : ಹಿಂದುಳಿದ ಪ್ರವರ್ಗಗಳಿಗೆ ಸೇರಿದ ವಿದ್ಯಾರ್ಥಿಯ ಪೋಷಕರ ವಾರ್ಷಿಕ ವರಮಾನ ಪ್ರವರ್ಗ-1 ಗೆ ರೂ.1,00,000/- ಹಾಗೂ ಪ್ರವರ್ಗ-2ಎ, 3ಎ, 3ಬಿ ಗಳಿಗೆ ರೂ.44,500/-ಗಳಿಗಿಂತ ಕಡಿಮೆ ವಾರ್ಷಿಕ ವರಮಾನ ಹೊಂದಿರುವ 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನವನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2016-17ನೇ ಸಾಲಿಗೆ ಆನ್‍ಲೈನ್ ಮೂಲಕ ವಿದ್ಯಾರ್ಥಿಗಳ/ಪೋಷಕರ ಬ್ಯಾಂಕ ಖಾತೆಗೆ ಜಮಾ ಮಾಡಲಾಗುತ್ತದೆ.
ಆದ್ದರಿಂದ ವಿದ್ಯಾರ್ಥಿಗಳ ಪೋಷಕರು ಕಡ್ಡಾಯವಾಗಿ ಜೂನ್ 25 ರೊಳಗಾಗಿ ರಾಷ್ಟ್ರೀಕೃತ ಬ್ಯಾಂಕಿನಲ್ಲಿ ತೆರೆದ ಬ್ಯಾಂಕಿನ ಐ.ಎಫ್.ಎಸ್.ಸಿ ಕೋಡ್ ಸಂಖ್ಯೆ ಮತ್ತು ಖಾತೆ ಸಂಖ್ಯೆ ಇರುವ ಪಾಸ ಪುಸ್ತಕದ ಮೊದಲ ಪುಟದ ಝೇರಾಕ್ಸ ಪ್ರತಿ, ಆಧಾರ ಕಾರ್ಡ ಝೇರಾಕ್ಸ ಪ್ರತಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರದ ಝೇರಾಕ್ಸ ಪ್ರತಿಗಳನ್ನು ಕಡ್ಡಾಯವಾಗಿ ಶಾಲಾ ಮುಖ್ಯೋಪಾಧ್ಯಾಯರಿಗೆ ನೀಡತಕ್ಕದ್ದು.
ಶಾಲಾ ಮುಖ್ಯೋಪಾಧ್ಯಾಯರು ಅರ್ಹ ವಿದ್ಯಾರ್ಥಿಗಳ ಪೋಷಕರಿಗೆ ಸೂಕ್ತ ತಿಳುವಳಿಕೆ ನೀಡಿ ಅವರಿಂದ ದಾಖಲಾತಿಗಳನ್ನು ಪಡೆದುಕೊಂಡು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನೀಡಲಾಗುವ ನಮೂನೆಯಲ್ಲಿ ವಿವರಗಳನ್ನು ಭರ್ತಿ ಮಾಡಿ ಎಲ್ಲಾ ದಾಖಲಾತಿಗಳನ್ನು ನೀಡಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ತಾಲೂಕಾ ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬೇಕೆಂದು ಬೆಳಗಾವಿ ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

loading...

LEAVE A REPLY

Please enter your comment!
Please enter your name here