ಪೌರತ್ವ ತಿದ್ದುಪಡಿ ಕಾಯ್ದೆ:ಮೂರು ದಿನ‌ ನಿಷೇಧಾಜ್ಙೆ ಜಾರಿ

0
54

ಬೆಳಗಾವಿ : ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ದೇಶದಾದ್ಯಂತ ಪ್ರತಿಭಟಣೆಗಳು ವ್ಯಕ್ತವಾಗುತ್ತಿರುವ ಹಿನ್ನಲೆಯಲ್ಲಿ, ಬುಧವಾರ ರಾತ್ರಿ 9ರಿಂದ ಡಿಸೆಂಬರ್ 21ಮಧ್ಯರಾತ್ರಿ 12 ಗಂಟೆವರೆಗೆ ಬೆಳಗಾವಿ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಹೇರಲಾಗಿದೆ.

ನಿಷೇಧಾಜ್ಞೆ ಸಂದರ್ಭದಲ್ಲಿ ಕಾಯ್ದೆಯನ್ನು ವಿರೋಧಿಸಿ ಅಥವಾ ಬೆಂಬಲಿಸಿ ಮೆರವಣಿಗೆ ನಡೆಸುವುದರ ಮೇಲೆ ನಿಷೇಧ ಹೇರಲಾಗಿದೆ.
ಕಾಯ್ದೆಯನ್ನು ವಿರೋಧಿಸಿ ವಿವಿಧ ಮುಸ್ಲಿಂ ಸಂಘಟನೆಗಳು ಬೆಳಗಾವಿಯಲ್ಲಿ ಭಾರೀ ಪ್ರತಿಭಟನೆ ನಡೆಸಿದ್ದವು. ಈ ಸಂದರ್ಭದಲ್ಲಿ ನಡೆದ ಕಲ್ಲು ತೂರಾಟದಲ್ಲಿ ಹಲವು ವಾಹನಗಳು ಜಖಂಗೊಂಡಿದ್ದವು. ಘಟನೆಗೆ ಸಂಬಂಧಪಟ್ಟಂತೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ದೇಶದ ತುಂಬ ಪ್ರಕ್ಷೋಭಕ ಸ್ಥಿತಿ ಇರುವ ಹಿನ್ನೆಲೆಯಲ್ಲಿ ಪ್ರಮುಖ ನಗರಗಳಲ್ಲಿ ನಿಷೇಧಾಜ್ಞೆ ಹೇರುವ ಮೂಲಕ ಕಾನೂನು ಸುವ್ಯವಸ್ಥೆ ಕಾಪಾಡಲು ಮುಂಜಾಗ್ರತೆ ಕ್ರಮ ಕೈಗೊಳ್ಳಲಾಗುತ್ತಿದೆ.

loading...