ಪ್ರತಿಯೊಬ್ಬರು ಮತದಾನ ಹಕ್ಕಿನಿಂದ ವಂಚಿತರಾಗದಿರಿ: ಡಿಸಿ

0
3

ಕನ್ನಡಮ್ಮ ಸುದ್ದಿ-ಬೆಳಗಾವಿ:ವಿಧಾನಸಭೆಯ ಚುನಾವಣೆಯಲ್ಲಿ ಪುರಷರಿಗಿಂತ ಮಹಿಳೆಯರ ಮತದಾನ ಸಂಖ್ಯೆ ಹೆಚ್ಚಾಗಿರುವುದನ್ನು ಕಾಣಬಹುದು. ಅದೇ ರೀತಿಯಲ್ಲಿ ಲೋಕಸಭಾ ಚುನಾವಣೆಯಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಿ ಎಂದು ಜಿಲ್ಲಾಧಿಕಾರಿ ಎಸ್ ಬಿ ಬೊಮ್ಮನಹಳ್ಳಿ ಹೇಳಿದರು.. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಿಳಾ ಹಾಗೂ ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಜಿಲ್ಲಾ ಸ್ತಿçÃಶಕ್ತಿ ಒಕ್ಕೂಟ ಬೆಳಗಾವಿ ಅವರುಗಳ ಸಂಯುಕ್ತಾಶ್ರಯದಲ್ಲಿ ಬುಧವಾರ ಕುಮಾರ ಗಂಧರ್ವ ಕಲಾಮಂದಿರದಲ್ಲಿ ಹಮ್ಮಿಕೊಂಡಿದ್ದ ಅಂತರರಾಷ್ಟಿçÃಯ ಮಹಿಳಾ ದಿನಾಚರಣೆ ಹಾಗೂ ಮತದಾನ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಯಾವುದೇ ಅರ್ಹ ವ್ಯಕ್ತಿಯು ಮತದಾನ ಹಕ್ಕಿನಿಂದ ವಂಚಿತರಾಗದೆ ಪ್ರತಿಯೊಬ್ಬರೂ ಮತ ಚಲಾಯಿಸಬೇಕು, ಒಂದು ವೇಳೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗದಿದ್ದರೆ ಈಗಲೂ ಅವಕಾಶವಿದ್ದು, ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದರು. ಶೇಕಡಾ ೩೦ ರಷ್ಟು ಯುವಕರು ಮತದಾರ ಪಟ್ಟಿಯಲ್ಲಿ ಸೇರ್ಪಡೆಯಾಗಿದ್ದಾರೆ ಇನ್ನು ಹೆಚ್ಚಿನ ಪ್ರಮಾಣದಲ್ಲಿ ಸೆರ್ಪಡೆಯಾಗಬೇಕು ಎಂದು ಹೇಳುತ್ತಾ ನಿಮ್ಮ ಮನೆಯವರಿಗೆ ಹಾಗೂ ನಿಮ್ಮ ಮನೆಯ ಸುತ್ತಮುತ್ತಲಿನವರಿಗೆ ಮತದಾನದ ಬಗ್ಗೆ ಜಾಗೃತಿ ಮೂಡಿಸಿ ಎಲ್ಲರೂ ಮತ ಚಲಾಯಿಸುವಂತೆ ಪ್ರೆÃರೇಪಿಸಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದರು. ಡಿ.ಸಿ.ಪಿ ಯಶೋಧಾ ಒಂಟಗೋಡಿ ಅವರು ಮಾತನಾಡಿ ಮಹಿಳೆಯರು ಮತ್ತು ಪುರುಷರು ಎನ್ನುವ ಕೀಳರಿಮೆಯನ್ನು ಮನೆಯಿಂದಲೇ ಕಿತ್ತುಹಾಕಬೇಕು ಮತ್ತು ತಾಯಿಯಾದವಳು ಹೆಣ್ಣು ಮಕ್ಕಳಿಗೆ ಮಾತ್ರ ಕೆಲಸ ಹೇಳುವ ಬದಲು ಗಂಡು ಮಕ್ಕಳಿಗೂ ಸಹ ಮನೆಗೆಲಸ ಮಾಡಲು ತಿಳಿಸಬೇಕು ಎಂದು ಮಹಿಳೆಯರಿಗೆ ಸಲಹೆ ನೀಡಿದರು. ಜಿಲ್ಲಾ ಪಂಚಾಯತ, ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಸ್ವಿಪ್ ಸಮಿತಿಯ ಅಧ್ಯಕ್ಷರಾದ ಡಾ.ರಾಜೇಂದ್ರ ಕೆ.ವಿ ಮಾತನಾಡಿ, ಮಹಿಳೆಯರು ನಿರ್ಭಿತರಾಗಿ ಯಾವುದೇ ಆಸೆ-ಆಮಿಷಗಳಿಗೆ ಒಳಗಾಗದೆ ಮತ್ತು ಯಾವುದೇ ಪ್ರೆÃರಣೆ, ದಾಕ್ಷಿÃಣ್ಯಗಳಿಂದ ಪ್ರಭಾವಿತರಾಗದೆ ಮತ ಚಲಾಯಿಸಬೇಕೆಂದು ಕರೆ ಕೊಟ್ಟರು. ಭ್ರಷ್ಟಾಚಾರ ನಿರ್ಮೂಲನೆಗೆ ನೈತಿಕ ಮತದಾನವೇ ಪ್ರಮುಖ ಅಸ್ತçವಾಗಿದೆ. ಮಹಿಳೆಯರು ಕೆಲಸದ ಜೊತೆಗೆ ಮನೆಯೊಳಗಡೆ ಇರುವ ಪ್ರತಿಯೊಂದು ಕೆಲಸವನ್ನು ಮಾಡುತ್ತಾರೆ. ಹಾಗೂ ಎಲ್ಲಾ ಕಾರ್ಯಕ್ಷೆÃತ್ರದಲ್ಲಿಯೂ ಪುರುಷರಿಗಿಂತ ಮಹಿಳೆಯರು ಮುಂದೆ ಇದ್ದಾರೆ ಎಂದರೆ ತಪ್ಪಾಗಲಾರದು ಎಂದು ಹೇಳಿದರು ಮತ್ತು ಇದೇ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲಾ ಮಹಿಳೆಯರಿಗೆ ಮತದಾರರ ಪ್ರತೀಜ್ಞಾ ವಿಧಿಯನ್ನು ಭೋದಿಸಿದರು. ವಿವಿಧ ವಿಭಾಗದಲ್ಲಿ ಸಾಧನೆ ಮಾಡಿದ ಮಹಿಳಾ ಸಾಧಕಿಯರಿಗೆ ಸನ್ಮಾನ ಮಾಡಲಾಯಿತು ಹಾಗೂ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಹಿಳೆಯರಿಗೆ ಬಹುಮಾನಗಳನ್ನು ವಿತರಿಸಿದರು. ಸುಚೇತನಾ ಕುಲಕರ್ಣಿ ನಿರೂಪಿಸಿದರು, ಶಿಲ್ಪಾ ಗುತ್ತಿ ಹಾಗೂ ಸಂಗಡಿಗರು ಪ್ರಾರ್ಥನಾ ಗೀತೆಯನ್ನು ಹಾಡಿದರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಅರುಣ ನೀರಗಟ್ಟಿ ಅತಿಥಿಗಳನ್ನು ಸ್ವಾಗತಿಸಿದರು, ಜಿಲ್ಲಾ ಸ್ತಿçÃಶಕ್ತಿ ಒಕ್ಕೂಟದ ಅಧ್ಯಕ್ಷ ಪ್ರಭಾವತಿ ಪತ್ತಾರ ವಂದಿಸಿದರು. ಈ ಸಂದರ್ಭದಲ್ಲಿ ಪ್ರಭಾರಿ ಐಎಎಸ್ ಅಧಿಕಾರಿಯಾದ ಭÀವರಸಿಂಗ್ ಮೀನಾ, ಗುನ್ನಗೋಳ, ಜ್ಯೊÃತಿ ಇಂಡಿ, ಸುರೇಖಾ ಹಿರೇಮಠ, ಪದ್ಮಜಾ, ಪ್ರಭಾವತಿ ಪತ್ತಾರ ಹಾಗೂ ಮತ್ತಿತರ ಮಹಿಳಾ ಕಾರ್ಯದರ್ಶಿಗಳು ವೇದಿಕೆ ಮೇಲೆ ಉಪಸ್ಥಿತರಿದ್ದರು.

loading...