ಪ್ರಧಾನಿ ನರೇಂದ್ರ ಮೋದಿ ಜನ್ಮದಿನ: ಅಭಿನಂದನೆಗಳ ಮಹಾಪೂರ

0
4

ನವದೆಹಲಿ :-ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು 70ನೇ ವಸಂತಕ್ಕೆ ಕಾಲಿಟ್ಟಿದ್ದು, ಈ ಹಿನ್ನೆಲೆಯಲ್ಲಿ ಅವರಿಗೆ ವಿಶ್ವ ನಾಯಕರಿಂದ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ.
ನೇಪಾಳದ ಪ್ರಧಾನಿ ಕೆ.ಪಿ. ಒಲಿ ಶರ್ಮಾ, , ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸೇರಿದಂತೆ ವಿವಿಧ ದೇಶದ ನಾಯಕರು ಶುಭಾಶಯ ಕೋರಿ ಅಭಿನಂದನೆ ಸಲ್ಲಿಸುತ್ತಿದ್ದಾರೆ.ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಶುಭಾಶಯ ಕೋರಿ, ಪತ್ರ ಬರೆದು ಪ್ರಧಾನಮಂತ್ರಿಯಾಗಿ ನೀವು ಮಾಡಿದ ಸಾಧನೆಯೂ ಅಂತಾರಾಷ್ಟ್ರೀಯ ಮಟ್ಟದ ಗೌರವಕ್ಕೆ ಅರ್ಹವಾಗಿದೆ ಎಂದೂ ಕೊಂಡಾಡಿದ್ದಾರೆ .
ನೇಪಾಳದ ಪ್ರಧಾನಮಂತ್ರಿ ಕೆ.ಪಿ.ಶರ್ಮಾ ಒಲಿ ಸಹ ಮೋದಿಯವರಿಗೆ ಶುಭ ಕೋರಿ, ಉಭಯ ದೇಶಗಳ ನಡುವಿನ ಸಂಬಂಧ ಬಲಪಡಿಸಲು ಒಟ್ಟಾಗಿ ಶ್ರಮಿಸೋಣ ಎಂದು ಅವರು ಸಂದೇಶದಲ್ಲಿ ಹೇಳಿದ್ದಾರೆ.

loading...