ಪ್ರಧಾನಿ ಮೋದಿ ಸರ್ಕಾರದ ವೈಫಲ್ಯಗಳ ಬಗ್ಗೆ ವಾಗ್ದಾಳಿ

0
15

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರದ ವೈಫಲ್ಯಗಳ ಕುರಿತು ಮಾಜಿ ಪ್ರಧಾನಿ ಮನ್‌ಮೋಹನ್ ಸಿಂಗ್ ವಾಗ್ದಾಳಿ ನಡೆಸಿದ್ದಾರೆ. 

ಕಪ್ಪುಹಣ, ನೋಟ್ ಬ್ಯಾನ್ ಹಾಗೂ ದೇಶದ ಯುವ ಜನತೆಗೆ ಉದ್ಯೋಗ ಸೃಷ್ಟಿಸುವಲ್ಲಿ ಮೋದಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಮನ್‌ಮೋಹನ್ ಸಿಂಗ್ ಟೀಕಿಸಿದರು. 

ನವದೆಹಲಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಮನ್‌ಮೋಹನ್ ಸಿಂಗ್ ಅವರು, ದೇಶದಲ್ಲಿ ಏಕಾಏಕಿಯಾಗಿ ಜಿಎಸ್ ಟಿ ಜಾರಿಗೊಳಿಸಿದ್ದರಿಂದ ಅನೇಕ ಉದ್ಯಮಿಗಳು ದಿವಾಳಿಯಾಗಿರುವ ಜತೆಗೆ ಉದ್ಯಮದ ಮೇಲೆ ಕೆಟ್ಟ ಪರಿಣಾಮ ಬೀರಿತು. ಇದರಿಂದ ನಿರುದ್ಯೋಗ ಸಹ ಸೃಷ್ಟಿಯಾಯಿತು ಎಂದರು. 

ಪ್ರಧಾನಿ ಮೋದಿ ಅವರು ಈ ಹಿಂದೆ 2 ಕೋಟಿ ಉದ್ಯೋಗ ನೀಡುವ ಭರವಸೆ ನೀಡಿದ್ದು ದೇಶದ ಯುವಕರು ಅದಕ್ಕಾಗಿ ಕಾಯುತ್ತಾ ಕುಳಿತಿದ್ದಾರೆ ಎಂದರು.

loading...