ಫಲಿತಾಂಶದಿಂದ ಮೈತ್ರಿ ಸರ್ಕಾರದ ಪತನಕ್ಕೆ ಕೌಂಟ್ ಡೌನ್ ಆರಂಭ

0
31

ಬೆಂಗಳೂರು:ನಗರ ಸ್ಥಳೀಯ ಸಂಸ್ಥೆಗಳ ಫಲಿತಾಂಶ ಮೈತ್ರಿ ಸರ್ಕಾರದ ಪತನಕ್ಕೆ ಕೌಂಟ್ ಡೌನ್ ಆರಂಭವಾಗಿರುವುದರ ಸಂಕೇತವಾಗಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್ ವಿಶ್ಲೇಷಿಸಿದ್ದಾರೆ.
ಚುನಾವಣಾ ಫಲಿತಾಂಶ ಪ್ರಕಟಗೊಂಡ ನಂತರ ಪಕ್ಷದ ಕಚೇರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು,ಈ ಚುನಾ ವಣೆಯಲ್ಲಿ ಜೆಡಿಎಸ್ ಪ್ರಾಬಲ್ಯ ಹೆಚ್ಚಿ, ಕಾಂಗ್ರೆಸ್ ಹಿಂಜರಿತ ಸ್ಪಷ್ಟವಾಗಿದೆ.ಕೆಲವು ಕಡೆಗಳಲ್ಲಿ ಬಿಜೆಪಿ ಸ್ಪಷ್ಟ ಮುನ್ನಡೆ ಸಾಧಿಸಿದೆ. ಕಳೆದ ಬಾರಿಗಿಂತ ಬಿಜೆಪಿ ಸ್ಥಳೀಯ ಸಂಸ್ಥೆಗಳಲ್ಲಿ ಉತ್ತಮ ಸಾಧನೆ ಮಾಡಿದೆ. ಲೋಕಸಭೆಯಲ್ಲಿ ನಾವು ನಿರೀಕ್ಷಿತ ಸ್ಥಾನ ಗಳಿಸುವುದು ಖಚಿತವೆಂದು ವಿಶ್ವಾಸ ವ್ಯಕ್ತಪಡಿಸಿದರು.
ವಿಧಾನ ಪರಿಷತ್ ಸದಸ್ಯ ವೈ.ಎ. ನಾರಾಯಣಸ್ವಾಮಿ ಮಾತನಾಡಿ,ರಾಜ್ಯದಲ್ಲಿ ಮೈತ್ರಿ ಸರ್ಕಾರ ಇರೋದರಿಂದ ಅವರು ಸ್ವಲ್ಪ ಹೆಚ್ಚು ಫಲಿತಾಂಶ ಪಡೆದಿರಬಹುದು. ನಾನು ಚಿತ್ರದುರ್ಗ ಜಿಲ್ಲೆಯ ಉಸ್ತುವಾರಿಯಾಗಿದ್ದೆ.ಚಿತ್ರದುರ್ಗದಲ್ಲಿ 40 ವರ್ಷಗಳ ನಂತರ ಜೆಡಿಎಸ್ ಕಾಂಗ್ರೆಸ್ ಪ್ರಾಬಲ್ಯ ನಿಯಂತ್ರಿಸಿ ಚಿತ್ರದುರ್ಗ ಮತ್ತು ಚಳ್ಳೆಕೆರೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ ಎಂದರು.

loading...