ಫ್ಲೋರಿಡಾದಲ್ಲಿ ಗುಂಡಿನ ದಾಳಿ: 3 ಸಾವು, 11 ಮಂದಿಗೆ ಗಾಯ

0
19

ಫ್ಲೋರಿಡಾ: ಅಮೇರಿಕಾದ ಪ್ಲೋರಿಡಾದಲ್ಲಿ ಜೊಕ್ಲೋನ್ ವಿಲ್ಲೆ ಎಂಬಲ್ಲಿ ಭಾನುವಾರ ಗುಂಡಿನ ದಾಳಿ ನಡೆದಿದೆ. ಹಾಗೂ ದಾಳಿಯಲ್ಲಿ ಮೂವರು ಸಾವನ್ನಪ್ಪಿ, 11ಕ್ಕೂ ಹೆಚ್ಚು ಮಂದಿಗೆ ಗಾಯಗೂಂಡಿದ್ದಾರೆ.
ಸ್ಥಳೀಯ ಕಾಲಮಾನದ ಪ್ರಕಾರ ನಿನ್ನೆ ಮಧ್ಯಾಹ್ನ ಸಮಯದಲ್ಲಿ ಘಟನೆ ಸಂಭವಿಸಿದ್ದು,ವಿಡಿಯೋ ಗೇಮ್ ಟೂರ್ನಮೆಂಟ್ ನಲ್ಲಿ ಈ ಗುಂಡಿನ ದಾಳಿ ನಡೆದಿದೆ. ಗುಂಡಿನ ದಾಳಿ ನಡೆಸಿದ್ದ ವ್ಯಕ್ತಿ ಕೂಡ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ವರದಿಗಳು ತಿಳಿಸಿವೆ.
ಗುಂಡಿನ ದಾಳಿ ನಡೆದ ಕೆಲವೇ ಕ್ಷಣಗಳಲ್ಲಿ ಸ್ಥಳಕ್ಕೆ ದೌಡಾಯಿಸಿದ ಅಧಿಕಾರಿಗಳು ಕೂಡಲೇ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದರು.
ಗುಂಡಿನ ದಾಳಿ ನಡೆಸಿದ ವ್ಯಕ್ತಿ ಸ್ಪರ್ಧಾಳು ಎಂದು ಹೇಳಲಾಗುತ್ತಿದ್ದು, ದಾಳಿಗೆ ಪ್ರಮುಖ ಕಾರಣಗಳು ತಿಳಿದುಬಂದಿಲ್ಲ.
ದಾಳಿ ನಡೆಸಿದ ವ್ಯಕ್ತಿಯನ್ನು ಶೆರಿಫ್ ಮೈಕ್ ವಿಲಿಯಮ್ ಎಂಬು ಗುರ್ತಿಸಲಾಗಿದೆ. ವಿಯಮ್ಸ್ ಸ್ಪರ್ಧಾಳುವಾಗಿದ್ದು, ಒಂದು ಗನ್ನಿನ ಮೂಲಕ ದಾಳಿ ನಡೆಸಿದ್ದ ಎಂದು ಅಧಿಕಾರಿಗಳು ಹೇಳಿದ್ದಾರೆ.

loading...