ಬಿಜೆಪಿ ಅಭ್ಯರ್ಥಿಗಳ ಪರ ಬಿ.ಶ್ರೀರಾಮುಲು ಮತಯಾಚನೆ

0
27

ಗುಳೇದಗುಡ್ಡ: ಬಾದಾಮಿ ಮತಕ್ಷೇತ್ರದ ಗುಳೇದಗುಡ್ಡ, ಬಾದಾಮಿ ಪುರಸಭೆಗಳು ಹಾಗೂ ಕೆರೂರು ಪಟ್ಟಣಪಂಚಾಯಿತಿಗಳಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಗಳು ಗೆಲವು ಸಾಧಿಸಿ, ಮೂರೂ ಭಾಗಗಳಲ್ಲಿ ಭಾರತೀಯ ಜನತಾಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಶಾಸಕ ಬಿ. ಶ್ರೀರಾಮುಲು ಹೇಳಿದರು.
ಅವರು ಇಲ್ಲಿನ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಇಲ್ಲಿನ ಬಿಜೆಪಿ ಮುಖಂಡರಾದ ರಾಜಶೇಖರ ಶೀಲವಂತ, ಮಲ್ಲಿಕಾರ್ಜುನ ಬನ್ನಿ, ಎಂ.ಕೆ. ಪಟ್ಟಣಶೆಟ್ಟಿ ಅವರ ನೇತೃತ್ವದಲ್ಲಿ ಗುಳೇದಗುಡ್ಡ ಪುರಸಭೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳಲ್ಲಿ 20 ಅಭ್ಯರ್ಥಿಗಳು ಗೆಲವು ಸಾಧಿಸಿ ಗುಳೇದಗುಡ್ಡ ಪುರಸಭೆಯ ಅಧಿಕಾರ ಮತ್ತೇ ಪಡೆಯಲಿದ್ದಾರೆ ಎಂದರು.
ಬಾದಾಮಿ ವಿಧಾನಸಭಾ ಕ್ಷೇತ್ರದಿಂದ ನಾನು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತರೂ ಇಲ್ಲಿನ ನಾಯಕರ, ಪಕ್ಷದ ಕಾರ್ಯಕರ್ತತರ, ಸಾರ್ವಜನಿಕರ ಸಂಪರ್ಕದಲ್ಲಿದ್ದೇನೆ. ಅವರ ಕಷ್ಟಸುಖಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿದ್ದೇನೆ. ಬಾದಾಮಿ ಮತಕ್ಷೇತ್ರದಿಂದ ಗೆದ್ದು ಹೋಗಿರುವ ಮಾಜಿ ಸಿಎಂ. ಸಿದ್ದರಾಮಯ್ಯನವರು ಕೇವಲ ಕಾಟಾಚಾರರಕ್ಕೆ ಇಲ್ಲಿಗೆ ಬಂದು ಹೋಗುತ್ತಿದ್ದಾರೆ. ಐತಿಹಾಸಿಕ ಸ್ಥಳವಾದ ಬಾದಾಮಿಯ ಜನರು ಸಂಕಷ್ಟದಲ್ಲಿದ್ದಾರೆ, ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಆದರೆ ಸಿದ್ದರಾಮಯ್ಯನವರ ಸಮ್ಮೀಶ್ರ ಸರ್ಕಾರವಿದ್ದರೂ ಇಲ್ಲಿನ ಜನರ ಸಂಕಷ್ಟಗಳಿಗೆ ಅವರು ಸ್ಪಂದಿಸುತ್ತಿಲ್ಲ. ಬಾದಾಮಿಕ್ಷೇತ್ರವನ್ನು ಸಿದ್ದರಾಮಯ್ಯನವರ ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಆರೋಪಿಸಿದರು.

ಅವರು ಮಂಗಳವಾರ ಇಲ್ಲಿನ ಸಾಲೇಶ್ವರ ದೇವಸ್ಥಾನದ ಹತ್ತಿರ ಪುರಸಭೆಗೆ ಸ್ಪರ್ಧಿಸಿರುವ ಬಿಜೆಪಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡಿ ಮಾತನಾಡಿ, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನೇಕಾರಪರವಾಗಿ, ರೈತಪರವಾಗಿ ನಿಂತಿದೆ. 14ನೇ ಹಣಕಾಸು ಯೋಜನೆಯಲ್ಲಿ 2.5 ಲಕ್ಷ ಕೋಟಿ ರೂ. ಬಡಾವಣೆ ಅಭಿವೃದ್ಧಿಗೆ ತೆಗೆದಿರಿಸಿದ್ದಾರೆ. ಅಭಿವೃದ್ಧಿ ಕೆಲಸ ಮಾಡುತ್ತಿರುವ ಮೋದಿ ಅವರ ಕೈ ಬಲಪಡಿಸಲು ಭಾರತೀಯ ಜನತಾ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ಅವರು ಮನವಿ ಮಾಡಿದರು.

loading...