ಬಿಜೆಪಿ ಪರ ರಮೇಶ ಕೆಲಸ ಮಾಡುತ್ತಿದ್ದಾರೆ : ಸತೀಶ ಜಾರಕಿಹೊಳಿ

0
15

ಬೆಳಗಾವಿ: ರಮೇಶ ಜಾರಕಿಹೊಳಿ ಪಕ್ಷದಲ್ಲಿ ಇರೋಲ್ಲ ಎಂಬ ಸಂದೇಶ ಬಂದಿದೆ. ಬಿಜೆಪಿ ಪರ ಮಾಜಿ ಸಚಿವ ರಮೇಶ ಜಾರಕಿಹೊಳಿ ಕೆಲಸ ಮಾಡುತ್ತಿದ್ದಾರೆ. ಮಾಜಿ ಸಚಿವ ರಮೇಶ ಜಾರಕಿಹೊಳಿ ವಿರುದ್ಧ ಶಿಸ್ತುಕ್ರಮಕ್ಕೆ ಶಿಫಾರಸ್ಸು ಮಾಡಲಾಗಿದೆ ಎಂದು ಅರಣ್ಯ ಸಚಿವ ಸತೀಶ್ ಜಾರಕಿಹೊಳಿ ಆರೋಪಿಸಿದ್ದಾರೆ.
ಬುಧವಾರ ಗೋಕಾಕ್ ತಾಲೂಕಿನ ಕೊಳವಿ ಗ್ರಾಮದಲ್ಲಿ ಲಖನ್ ಜಾರಕಿಹೊಳಿ ಜೊತೆ ಕಾಂಗ್ರೆಸ್ ಪರ ಪ್ರಚಾರ ನಡೆಸುವ ವೇಳೆ ಮಾಧ್ಯಮದವರಿಗೆ ತಿಳಿಸಿದ್ದಾರೆ.
ಗೋಕಾಕ್ ವಿಧಾನ ಸಭೆ ಕ್ಷೇತ್ರದಲ್ಲಿ ರಮೇಶಗೆ ಪರ್ಯಾಯವಾಗಿ ಲಖನ್ ಜಾರಕಿಹೊಳಿ ಕೆಲಸ ಮಾಡುತ್ತಿದ್ದಾರೆ. ರಮೇಶ ಜಾರಕಿಹೊಳಿ ವಿರುದ್ಧ ಹೈಕಮಾಂಡ್‌ಗೆ ಲಿಖಿತ ದೂರು ಸಲ್ಲಿಕೆಯಾಗಿದೆ. ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ದೂರು ನೀಡಲಾಗಿದೆ ಎಂದು ಹೇಳಿದರು.
ಚಿಕ್ಕೋಡಿ, ನಿಪ್ಪಾಣಿಯಲ್ಲಿ ಬಿಜೆಪಿ ಪರ ಕೆಲಸ ಮಾಡಿರೋದು ಗೊತ್ತಾಗಿದೆ ಹೀಗಾಗಿ ರಮೇಶ್ ವಿರುದ್ದ ಶಿಸ್ತಿನ ಕ್ರಮಕ್ಕೆ ಶಿಪ್ಪಾರಸ್ಸು ಮಾಡಲಾಗಿದೆ ಎಂದು ಹೇಳಿದ್ದಾರೆ.

loading...