ಬೆಳಗಾವಿ ಜಿಪಂ‌ ಸಭಾಂಗಣದಲ್ಲಿ ಬಿಎಸ್ ವೈ ಸರಕಾರದ ವರ್ಷದ ಸ್ಪರ್ಶ ನೇರ ಪ್ರಸಾರ ಕಣ್ತುಂಬಿಕೊಂಡ ಜನತೆ

0
30

ಬೆಳಗಾವಿ ಜಿಪಂ‌ ಸಭಾಂಗಣದಲ್ಲಿ ಬಿಎಸ್ ವೈ ಸರಕಾರದ ವರ್ಷದ ಸ್ಪರ್ಶ ನೇರ ಪ್ರಸಾರ ಕಣ್ತುಂಬಿಕೊಂಡ ಜನತೆ

ಬೆಳಗಾವಿ

ಕೋವಿಡ್-19 ಲಾಕ್ ಡೌನ್ ವೇಳೆ ತಾಯಿಗೆ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಸಂದರ್ಭದಲ್ಲಿ ಸಿಎಂ ಯಡಿಯೂರಪ್ಪ ಅವರು ಔಷಧಿಗಳನ್ನು ಪೂರೈಕೆ ಮಾಡಿದ್ದಕ್ಕೆ ರಾಮದುರ್ಗದ ಪವಿತ್ರಾ ಹಾಲಬಾವಿ ಸಿಎಂ ಯಡಿಯೂರಪ್ಪ ಅವರಿಗೆ ಧನ್ಯವಾದ ತಿಳಿಸಿದರು.

ಬೆಳಗಾವಿ ಜಿಪಂ ಸಭಾಂಗಣದಲ್ಲಿ ಸೋಮವಾರ ರಾಜ್ಯ ಸರಕಾರದ ಒಂದು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ನೇತೃತ್ವದಲ್ಲಿ ವಿಧಾನಸೌಧದಲ್ಲಿ “ಸವಾಲುಗಳ ವರ್ಷ; ಪರಿಹಾರದ ಸ್ಪರ್ಶ” ಕಾರ್ಯಕ್ರಮ ನಡೆಯಿತು. ಇದರ ನೇರ ಪ್ರಸಾರದಲ್ಲಿ ಸಿಎಂ ಜತೆ ಮಾತನಾಡಿದರು.

ಕೋವಿಡ್-19 ಲಾಕ್ ಡೌನ್ ವೇಳೆಯಲ್ಲಿ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ನನ್ನ ತಾಯಿಗೆ ಸೂಕ್ತ ಚಿಕಿತ್ಸೆ ನೀಡಿಸಿದ್ದಕ್ಕೆ ಸಿಎಂಗೆ ಹಾಗೂ ಸರಕಾರಕ್ಕೆ ಶ್ಲಾಘನೀಯ ವ್ಯಕ್ತಪಡಿಸಿದರು.

ಸಿಎಂ ಯಡಿಯೂರಪ್ಪ ಇದಕ್ಕೆ ಸಕಾರಾತ್ಮಕವಾಗಿ ಉತ್ತರಿಸಿ, ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡುವುದೇ ಸರಕಾರದ ಕೆಲಸ ಯಾವುದಕ್ಕೂ ಎದೆಗುಂದಬೇಡಿ ಎಂದು ಅಭಯ ಹಸ್ತ‌‌ ನೀಡಿದರು.

ಜಿಲ್ಲಾಮಟ್ಟದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಸರಕಾರದ ವರ್ಷದ ಪ್ರಗತಿ ವರದಿ ವಿಶೇಷ ಪುಸ್ತಕವನ್ನು ಬಿಡುಗಡೆಗೊಳಿಸಿದರು.

ರೈಲ್ವೆ ಇಲಾಖೆಯ ರಾಜ್ಯ ಸಚಿವ ಸುರೇಶ್ ಅಂಗಡಿ, ವಿಧಾನಸಭೆಯ ಉಪ ಸಭಾಧ್ಯಕ್ಷ ಆನಂದ ಮಾಮನಿ, ವಿಧಾನಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಸಂಸದ ಅಣ್ಣಾಸಾಹೇಬ್ ಜೊಲ್ಲೆ, ಜಿಲ್ಲಾ ಪಂಚಾಯತ ಅಧ್ಯಕ್ಷೆ ಆಶಾ ಐಹೊಳೆ, ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಮಹೇಶ್ ಕುಮಠಳ್ಳಿ, ತಾಂಡ ಅಭಿವೃದ್ಧಿ ನಿಗಮದ ಅಧ್ಯಕ್ಷ ಪಿ.ರಾಜೀವ್, ಶಾಸಕರಾದ ದುರ್ಯೋಧನ ಐಹೊಳೆ, ಪ್ರಾದೇಶಿಕ ಆಯುಕ್ತ ಆಮ್ಲಾನ್ ಆದಿತ್ಯ ಬಿಸ್ವಾಸ್, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಪೊಲೀಸ್ ಆಯುಕ್ತ ತ್ಯಾಗರಾಜನ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ರಾಜೇಂದ್ರ ಕೆ.ವಿ., ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಮತ್ತಿತರರು ಉಪಸ್ಥಿತರಿದ್ದರು. ವಿವಿಧ ಯೋಜನೆಗಳ ಫಲಾನುಭವಿಗಳು ಕೂಡ ಹಾಜರಿದ್ದರು.

loading...