ಬೆಳಗಾವಿ ಜಿಲ್ಲಾಸ್ಪತ್ರೆಯ ವೈದ್ಯಗೆ ಕೊರೋನಾ ಸೋಂಕು: ಓಪಿಡಿ ಸೀಲ್‌ಡೌನ್

0
37

ಬೆಳಗಾವಿ

ಕೊರೋನಾ ವೈರಸ್ ಸೋಂಕು ಬೆಳಗಾವಿಯಲ್ಲಿ ದಿನದಿಂದ ದಿನಕ್ಕೆ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ನೂರಾರು ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ೨೩ ವರ್ಷದ ವೈದ್ಯಗೂ ಕೊರೋನಾ ಸೋಂಕು ತಗುಲಿದ ಹಿನ್ನೆಲೆಯಲ್ಲಿ ಓಪಿಡಿ ವಿಭಾಗವನ್ನ ಸೀಲ್‌ಡೌನ್ ಮಾಡಲಾಗಿದೆ.
ಬೆಳಗಾವಿಯ ಜಿಲ್ಲಾ ಆಸ್ಪತ್ರೆಯಲ್ಲಿ ಓಪಿಡಿ ಮತ್ತು ಕೋವಿಡ್ ವಾರ್ಡ್ ಒಂದೇ ಕಟ್ಟಡದಲ್ಲಿ ಇರುವದರಿಂದ ಓಪಿಡಿಯನ್ನು ಬೇರೆ ಕಟ್ಟಡಕ್ಕೆ ಸ್ಥಳಾಂತರ ಮಾಡಲು ಬೆಳಗಾವಿ ಜಿಲ್ಲಾಡಳಿತ ಮುಂದಾಗಿದೆ.
ಜಿಲ್ಲಾ ಆಸ್ಪತ್ರೆಯಲ್ಲಿ ನೂರಾರು ಹೊರರೋಗಿಗಳಿಗೆ ಚಿಕಿತ್ಸೆ ನೀಡಿದ ವೈದ್ಯೆಗೂ ಸೊಂಕು ತಗಲಿದ ಕಾರಣ ಜಿಲ್ಲಾ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯಕೀಯ ಸಿಬ್ಬಂಧಿಗೆ ಆತಂಕ ಶುರುವಾಗಿದೆ ಬೆಳಗಾವಿ ಜಿಲ್ಲೆಯಲ್ಲಿ ನಿನ್ನೆಯವರೆಗೆ ೪೬೫ ಸೊಂಕಿತರು ಪತ್ತೆಯಾಗಿದ್ದರು ಅದರಲ್ಲಿ ೧೧೬ ಜನರಲ್ಲಿ ಸೊಂಕು ಸಕ್ರಿಯಗಾವಿದ್ದು ಅವರನ್ನು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

loading...