ಭಗವಾನ ಮಹಾವೀರ ಜಯಂತಿ: ಜಿಲ್ಲಾಡಳಿತದಿಂದ ಭಕ್ತಿ ನಮನ ಸಲ್ಲಿಕೆ

0
3

 

ಕನ್ನಡಮ್ಮ ಸುದ್ದಿ-ಕೊಪ್ಪಳ: ಭಗವಾನ ಮಹಾವೀರ ಜಯಂತಿಯ ಅಂಗವಾಗಿ ಕೊಪ್ಪಳ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಭಗವಾನ ಮಹಾವೀರರವರ ಭಾವಚಿತ್ರಕ್ಕೆ ಪುಷ್ಪವನ್ನು ಅರ್ಪಿಸಿ ಭಕ್ತಿ ನಮನ ಸಲ್ಲಿಸುವ ಮೂಲಕ ಸರಳವಾಗಿ ಆಚರಿಸಲಾಯಿತು.
ಲೋಕಸಭಾ ಸಾರ್ವತ್ರಿಕ ಚುನಾವಣಾ ನೀತಿ ಸಂಹಿತೆಯ ಕಾರಣದಿಂದಾಗಿ ಜಿಲ್ಲಾಡಳಿತ ವತಿಯಿಂದ ಭಗವಾನ ಮಹಾವೀರ ಅವರ ಜಯಂತಿಯನ್ನು ಬುಧವಾರದಂದು ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಸರಳವಾಗಿ ಆಚರಿಸಲಾಯಿತು. ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್.ಎಸ್. ಪೆದ್ದಪ್ಪಯ್ಯ, ಅಪರ ಜಿಲ್ಲಾಧಿಕಾರಿ ಬಾಲಚಂದ್ರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೃಷ್ಣಮೂರ್ತಿ ದೇಸಾಯಿ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಭಗವಾನ ಮಹಾವೀರ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆಗೈದು ಭಕ್ತಿ ನಮನ ಸಲ್ಲಿಸಿದರು.

loading...