ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ರದ್ದತಿಗೆ ರೈತರ ಆಗ್ರಹ

0
19

ಬೆಳಗಾವಿ
ಕರ್ನಾಟಕ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ರದ್ದುಪಡಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ಶುಕ್ರವಾರ ನಗರದ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಕೇಂದ್ರ ಸಚಿವ ಸುರೇಶ ಅಂಗಡಿ ಕಾರ್ಯಾಲಯಕ್ಕೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.
ಚನ್ನಮ್ಮ ವೃತ್ತದಲ್ಲಿ ಜಮೆಗೊಂಡಿದ್ದ ರೈತರು ಕೇಂದ್ರ ಸಚಿವರು ಎಲ್ಲಿಯೇ ಇರಲಿ, ಘೇರಾವ್ ಹಾಕುತ್ತೇವೆ, ಕಾಯ್ದೆಯನ್ನು ಹಿಂದಕ್ಕೆ ಪಡೆಯುವವರೆಗೆ ಹೋರಾಟ ಮುಂದುವರಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ರದ್ದುಪಡಿಸಬೇಕು ಕೇಂದ್ರ ಸಚಿವರ ಕಾರ್ಯಾಲಯಕ್ಕೆ ಧಾವಿಸುತ್ತಿದ್ದ ನೂರಾರು ರೈತರನ್ನು ಪೊಲೀಸರು ತಡೆದರು. ಈ ಸಂದರ್ಭದಲ್ಲಿ ರೈತರು ಮತ್ತು ಪೊಲೀಸರ ನಡುವೆ ವಾಗ್ವಾದ ನಡೆಯಿತು. ಪೊಲೀಸರು ಕಾಡಾ ಕಚೇರಿಯ ಸುತ್ತ ಬಿಗಿ ಭದ್ರತೆ ಕೈಗೊಂಡಿದ್ದರು.
ಚುನ್ನಪ್ಪ ಪೂಜಾರಿ, ಜಯಶ್ರೀ ಗುರಣ್ಣವರ, ಪಾಂಡುರAಗ ಬೀರನಗಡ್ಡಿ, ವಿ ಎಮ್ ಸಸಾಲಟ್ಟಿ, ಪ್ರಕಾಶ ತೇರದಾಳ, ಅಶೋಕ ಮಾಚಕನೂರ, ವೆಂಕಪ್ಪಾ ಅವರಾದಿ, ಲಕ್ಷ್ಮಣ ತೋಳಮರ್ಡಿ, ಸಕ್ರೆಪ್ಪಾ ತೋಳಮರ್ಡಿ, ಸುಭಾಸ ಸಾರಾಪೂರ, ಮಲ್ಲಪ್ಪಾ ಕುರಿ, ಯಮನಪ್ಪ ಚಿಂಚನೂರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

loading...