ಮಡಿವಾಳ ಹತ್ಯೆ ಖಂಡಿಸಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ

0
105


ಕನ್ನಡಮ್ಮ ಸುದ್ದಿ
ಬೆಳಗಾವಿ:14 ಶರತ ಮಡಿವಾಳರ ಹತ್ಯೆ ಪ್ರಕರಣವನ್ನು ಎನ್.ಐ.ಎ ನೀಡಬೇಕು ಎಂದು ಆಗ್ರಹಿಸಿ ಶುಕ್ರವಾರ ಭಾರತೀಯ ಜನತಾ ಪಕ್ಷದ ಯುವ ಮೋರ್ಚಾ ನೇತ್ರತ್ವದಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ರಾಜ್ಯದಲ್ಲಿ ಕಳೆದ ಕೆಲವು ದಿನಗಳಲ್ಲಿ ಹಲವಾರು ಹಿಂದು ಪರ ಸಂಘಟನೆಯ ಕಾರ್ಯಕರ್ತರ ಬರ್ಭರ ಹತ್ಯೆಗಳು ಮೇಲಿಂದ ಮೇಲೆ ನಡೆಯುತ್ತಿವೆ. ರಾಜ್ಯದ ಆಡಳಿತ ಕುಸಿದು ಹೋಗಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿದರು.
ರಾಜೇಂದ್ರ ಹರಕುಣಿ, ಅನೀಲ ಬೆನಕೆ, ರಾಜು ಟೋಪಣ್ಣವರ, ಕಿರಣ ಜಾಧವ, ಸದಾಂದ ಗುಂಟೆಪ್ಪಣವರ ಸೇರಿದಂತೆ ಇತರರು ಉಪಸ್ಥಿತರಿದ್ದರು.

loading...