ಮತದಾನ ಜಾಗೃತಿ ಅಭಿಯಾನಕ್ಕೆ ನ್ಯಾಯಾಧೀಶರಿಂದ ಚಾಲನೆ

0
2

ಕನ್ನಡಮ್ಮ ಸುದ್ದಿ-ಕೊಪ್ಪಳ: ಲೋಕಸಭಾ ಸಾರ್ವತ್ರಿಕ ಚುನಾವಣೆ ನಿಮಿತ್ತ ಮತದಾನದ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಕೊಪ್ಪಳ ನಗರಾದ್ಯಂತ ಮಂಗಳವಾರದಂದು ಆಯೋಜಿಸಲಾದ ಬೃಹತ್ ಮತದಾನ ಜಾಗೃತಿ ಅಭಿಯಾನಕ್ಕೆ ಜಿಲ್ಲಾ ಮತ್ತು ಸತ್ರ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಸಂಜೀವ ವಿ. ಕುಲಕರ್ಣಿ ಅವರು ಹಸಿರು ನಿಶಾನೆ ತೋರಿಸುವುದರ ಮೂಲಕ ಚಾಲನೆ ನೀಡಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಸ್ವಿÃಪ್ ಸಮಿತಿ ವತಿಯಿಂದ ಜಿಲ್ಲಾ ನ್ಯಾಯಾಲಯ ಆವರಣದಿಂದ ನಗರದ ಅಶೋಕ ವೃತ್ತದವರೆಗೆ ಮತದಾನ ಜಾಗೃತಿ ಅಭಿಯಾನ ಹಾಗೂ ಅಶೋಕ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಮತದಾನ ಅರಿವು ಮೂಡಿಸಲಾಯಿತು. ಪ್ರಜಾಪ್ರಭುತ್ವ ಬಲಗೊಳ್ಳಲು ಮತ ಪ್ರಮಾಣ ಹೆಚ್ಚಬೇಕು. ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಮತದಾನದಲ್ಲಿ ಎಲ್ಲ ಅರ್ಹ ಮತದಾರರು ತಪ್ಪದೇ ಭಾಗವಹಿಸಿ ಎಲ್ಲರೂ ತಮ್ಮ ಅಮೂಲ್ಯವಾದ ಮತವನ್ನು ಚಲಾಯಿಸಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಸ್ವಿÃಪ್ ಸಮಿತಿ ಅಧ್ಯಕ್ಷ ಆರ್.ಎಸ್. ಪೆದ್ದಪ್ಪಯ್ಯ ಹೇಳಿದರು. ಈ ಸಂಧರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಟಿ. ಶ್ರಿÃನಿವಾಸ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಈರಣ್ಣ ಪಂಚಾಳ್, ಸರ್ಕಾರಿ ವಕೀಲ ಆಸೀಪ್ ಅಲಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ವಕೀಲರು ಹಾಗೂ ವಿವಿಧ ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳು ಮತದಾನ ಜಾಗೃತಿ ಅಭಿಯಾನದಲ್ಲಿ ಉಪಸ್ಥಿತರಿದ್ದು, ನಮ್ಮ ಮತ ನಮ್ಮ ಹಕ್ಕು, ನಮ್ಮ ನಡೆ ಮತಗಟ್ಟೆ ಕಡೆ, ಮತ ಚಲಾಯಿಸಿ ಪ್ರಜಾಪ್ರಭುತ್ವ ಬಲಗೊಳಿಸಿ, ಪ್ರಜಾಪ್ರಭುತ್ವ ನಮ್ಮಿಂದ ಮತದಾನ ನೀಡಿ ಹೆಮ್ಮೆಯಿಂದ, ಏಪ್ರಿಲ್. ೨೩ ರಂದು ಮತದಾನ ಮಾಡಿ, ಮೈ ವೋಟ್ ಮೈ ರೈಟ್ಸ್ ಹಾಗೂ ಇನ್ನೂ ಅನೇಕ ಘೋಷ ವಾಕ್ಯಗಳನ್ನು ಕೈಯಲ್ಲಿ ಹಿಡಿದು ಸಾರ್ವಜನಿಕರಿಗೆ ಮತದಾನ ಬಗ್ಗೆ ಅರಿವು ಮೂಡಿಸಲಾಯಿತು.

loading...