ಮಾತೆ ಮಹಾದೇವಿ ಲಿಂಗೈಕ್ಯ

0
23

ಬೆಂಗಳೂರು: ಕೂಡಲಸಂಗಮದ ಬಸವ ಧರ್ಮ ಪೀಠದ ಅಧ್ಯಕ್ಷೆ, ಮಾತೆ ಮಹಾದೇವಿ ನಿಧನರಾಗಿದ್ದಾರೆ. ಇನ್ನೊಂದು ಗಂಟೆಯಲ್ಲಿ ಆಸ್ಪತ್ರೆಯಿಂದ ಮೃತದೇಹವನ್ನ ರಾಜಾಜಿನಗರದ ಬಸವ ಮಂಟಪಕ್ಕೆ ರವಾನೆ ಮಾಡುವ ಸಾಧ್ಯತೆಗಳಿದ್ದು, ಅರ್ಧ ಗಂಟೆ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಮಾಡಿಕೊಡಲು ನಿರ್ಧರಿಸಲಾಗಿದೆ ಎಂಬ ಮೂಲಗಳು ಹೇಳಿವೆ.
ಬಳಿಕ ಕೂಡಲಸಂಗಮಕ್ಕೆ ಅವರ ಪಾರ್ಥಿವ ಶರೀರವನ್ನ ತೆಗೆದುಕೊಂಡು ಹೋಗಲಾಗುವುದು ಎಂದು ಕೂಡಲಸಂಗಮದ ಬಸವ ಧರ್ಮ ಪೀಠದ ಮೂಲಗಳು ಮಾಹಿತಿ ನೀಡಿದ್ದು, ನಾಳೆ ಕೂಡಲಸಂಗಮದಲ್ಲಿ ಲಿಂಗೈಕ್ಯರ ಸಂಸ್ಕಾರ ನಡೆಯಲಿದೆ ಎಂದು ಹೇಳಲಾಗಿದೆ.
ಈ ಮೊದಲು ಅವರ ಆರೋಗ್ಯಸ್ಥಿತಿ ತೀರಾ ಗಂಭೀರವಾಗಿದೆ ಎಂದು ನಗರದ ಮಣಿಪಾಲ್ ಆಸ್ಪತ್ರೆಯ ವೈದ್ಯರಾದ ಸುದರ್ಶನ ಬಲ್ಲಾಳ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದರು.

loading...