ಮೈತ್ರಿ ಸರ್ಕಾರ ಹೆಚ್ಚುದಿನ ಆಡಳಿತನಡೆಸುವುದಿಲ್ಲ: ಶಾಸಕ ಶೆಟ್ಟರ್‌

0
18

ಕನ್ನಡಮ್ಮ ಸುದ್ದಿ-ಹುಬ್ಬಳ್ಳಿ: ಯಾವುದೇ ಸಂದರ್ಭದಲ್ಲಿ ಬೇಕಾದರು ಸಮ್ಮಿಶ್ರ ಸರ್ಕಾರ ಬೀಳಬಹುದು. ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಸಮ್ಮಿಶ್ರ ಸರ್ಕಾರದಲ್ಲಿ ಸಾಕಷ್ಟು ಅಸಮಾಧಾನ ಇದೆ. ಜನಾದೇಶದ ವಿರುದ್ಧವಾದ ಮೈತ್ರಿ ಸರ್ಕಾರ ಬಹಳ ದಿನ ಅಧಿಕಾರದಲ್ಲಿರುವುದಿಲ್ಲ ಎಂದು ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಹೇಳಿದರು.
ನಗರದಲ್ಲಿಂದು ಮಾತನಾಡಿದ ಅವರು, ಚುನಾವಣಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ನೀಡುವಂತೆ ಭರವಸೆ ನೀಡಿದ್ದರು. ಸಿಎಂ ಕುಮಾರಸ್ವಾಮಿ ಅವರು ತಮ್ಮ ಚುನಾವಣಾ ಪ್ರಣಾಳಿಕೆಯನ್ನು ತೆಗೆದು ನೋಡಲಿ ಗೊತ್ತಾಗುತ್ತದೆ. ರೈತರ ಸಾಲಮನ್ನಾದಲ್ಲಿ ಸಾಕಷ್ಟು ಗೊಂದಲ ಮಾಡಿದ್ದಾರೆ. ಬರುವ ದಿನಗಳಲ್ಲಿ ಅವರಿಗೆ ಚುನಾವಣಾ ಪ್ರಣಾಳಿಕೆಗೆ ಯಾವುದೇ ಕಿಮ್ಮತ್ತು ಇಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು. ಸಿಎಂ ಕುಮಾರಸ್ವಾಮಿ ಹಸಿಸುಳ್ಳು ಹೇಳುವ ಕೆಲಸ ಮಾಡುತ್ತಿದ್ದಾರೆ. ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಹೊಂದಾಣಿಕೆ ನಡೆಯುತ್ತದೆ. ಮಾಜಿ ಪ್ರಧಾನಿ ಹೆಚ್‌ ಡಿ ದೇವೇಗೌಡ ಲೋಕಸಭಾ ಚುನಾವಣೆಗೆ ಜೆಡಿಎಸ್‌ ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂದ ಹೇಳುತ್ತಿದ್ದಾರೆ. ಹೀಗಾಗಿ ಕಾಂಗ್ರೆಸ್‌ ಜೆಡಿಎಸ್‌​ನಲ್ಲಿ ನಿರಂತರವಾಗಿ ಗೊಂದಲ ಮುಂದುವರದಿದೆ. ರಾಜ್ಯದ ಜನತೆಗೆ ಇವರ ನಾಟಕ ಗೋತ್ತಾಗಿದೆ ಸುಳ್ಳು ಹೇಳುವುದನ್ನು ಮನದಟ್ಟು ಮಾಡಿಕೊಂಡಿದ್ದಾರೆ. ಅವರ ನಡುವೇ ಹಲಾವಾರ ವಿಷಯಗಳ ಬಗ್ಗೆ ಕಿತ್ತಾಟ ನಡೆದಿದೆ ಯಾವುದೇ ಸಂದರ್ಭದಲ್ಲಿ ಬೇಕಾದರು ಸಮ್ಮಿಶ್ರ ಸರ್ಕಾರ ಬಿಳಬಹುದು ಎಂದು ಶೆಟ್ಟರ್‌​ ನುಡಿದರು.

loading...