ರಾಜ್ಯದ ಕಾನೂನು ಸುವ್ಯವಸ್ಥೆ ಖಂಡಿಸಿ ಎಬಿವಿಪಿ ಪ್ರತಿಭಟನೆ

0
47

ಕನ್ನಡಮ್ಮ ಸುದ್ದಿ-ಬೆಳಗಾವಿ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದನ್ನು ಖಂಡಿಸಿ ನಗರದಲ್ಲಿ ಪ್ರತಿಭಟನೆ ನಡೆಸಿದರು.
ಕರ್ನಾಟಕದಲ್ಲಿ ಮಲ್ಲಿಕಾರ್ಜುನ ಬಂಡೆ, ಡಿ.ಕೆ ರವಿ,ಗಣಪತಿ ಹೆಗಡೆ, ಮುಂತಾದ ಪ್ರಮಾಣಿಕ ಅಧಿಕಾರಿಗಳ ಕೊಲೆ , ಆತ್ಮಹತ್ಯೆ, ಬೆದರಿಕೆ ಹಾಗೂ ವರ್ಗಾವಣೆ ಸರ್ವೆ ಸಾಮಾನ್ಯಾಗಿವೆ.ಆದರೆ ರಾಜ್ಯ ಸರ್ಕಾರ ಇಂತಹ ಪ್ರಕರಣಗಳಿಗೆ ಅಂತ್ಯ ನೀಡದೆ ಇರುವುದು ಖಂಡನಿಯವಾಗಿದೆ.
ಬೆಂಗಳೂರಿನ ಲೋಕಾಯುಕ್ತ ಕಚೇರಿಯಲ್ಲಿ ನ್ಯಾ.ವಿಶ್ವನಾಥ ಶೆಟ್ಟಿಯವರನ್ನು ಹತೈಗೆಯಲು ಯತ್ನಿಸಿರುವುದನ್ನು ಖಂಡಿಸಿ ಎಬಿವಿಪಿ ರಾಜ್ಯಾದ್ಯಂತ ಪ್ರತಿಭಟನೆ ಕರೆ ನೀಡಿದ ಹಿನ್ನಲೆಯಲ್ಲಿ ನಗರದಲ್ಲಿ ಪ್ರತಿಭಟನೆ ನಡೆಸಿದರು.
ಒಬ್ಬ ಸಾಮಾನ್ಯ ವ್ಯಕ್ತಿ ರಾಜ್ಯದ ಭ್ರಷ್ಟರನ್ನು ಎಡೆಮುರಿಕಟ್ಟುವ ಅಧಿಕಾರಿಯನ್ನು ಕಚೇರಿಯಲ್ಲಿ ಚಾಕುವಿನಿಂದ ಇರಿದು ಕೊಲೆ ಮಾಡುವ ಪ್ರಯತ್ನ ಮಾಡಿರುವುದು ರಾಜ್ಯದಲ್ಲಿ ಕಾನೂನು ಹಾಗೂ ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ ಎಂದು ರಾಜ್ಯ ಸರ್ಕಾರ ಹಾಗೂ ಪೊಲೀಸ್ ಇಲಾಖೆಯನ್ನು ಪ್ರತಿಭಟನೆಯ ಮೂಲಕ ಖಂಡಿಸಿದರು.
ಈ ಸಂದರ್ಭದಲ್ಲಿ ಅಖಿಲ ಭಾರತಿಯ ಪರಿಷತ್ ಜಿಲ್ಲಾಧ್ಯಕ್ಷ, ಉಪಾಧ್ಯಕ್ಷ, ಸದಸ್ಯರು ವಿದ್ಯಾರ್ಥಿಗಳು ಭಾಗಿಯಾಗಿದ್ದರು.

loading...