ರಾಜ್ಯಸಭಾ ಸದಸ್ಯ ಕಡಾಡಿ ಹುಕ್ಕೇರಿ ಹಿರೇಮಠದ ಶಾಖೆಗೆ ಭೇಟಿ

0
14

ಬೆಳಗಾವಿ
ರಾಜ್ಯಸಭಾ ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾಗಿರುವ ಈರಣ್ಣಾ ಕಡಾಡಿ ಅವರು ನಗರದ ಲಕ್ಷಿö್ಮÃ ಟೆಕಡಿಯ ಹುಕ್ಕೇರಿ ಹಿರೇಮಠದ ಶಾಖೆಗೆ ಮಂಗಳವಾರ ಭೇಟಿ ನೀಡಿ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ, ಬೆಳಗಾವಿ ಜಿಲ್ಲೆಗೆ ವಿಶೇಷವಾಗಿರುವ ಸ್ಥಾನಮಾನವನ್ನು ರಾಜ್ಯ ಹಾಗೂ ಕೇಂದ್ರ ಸರಕಾರ ನೀಡಿದೆ. ನಾವೆಲ್ಲರೂ ಸಹ ಹುಮ್ಮಸ್ಸಿನಿಂದ ಕಾರ್ಯನಿರ್ವಹಿಸುತ್ತೇವೆ. ಸಾಮಾನ್ಯ ಕಾರ್ಯಕರ್ತರಿಗೆ ನನಗೆ ರಾಜ್ಯಸಭೆಗೆ ಆಯ್ಕೆ ಮಾಡಿರುವುದು ಸಂತಸವಾಗಿದೆ. ಇನ್ನೂ ಹೆಚ್ಚು ಹೆಚ್ಚು ಕಾರ್ಯವನ್ನು ಮಾಡುವ ಶಕ್ತಿಯನ್ನು ಎಲ್ಲ ಗುರುಗಳು ಮಾರ್ಗದರ್ಶನ ಮಾಡಬೇಕೆಂದು ಪ್ರಾರ್ಥನೆ ಮಾಡಿದರು.
ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಬೆಳಗಾವಿ ಜಿಲ್ಲೆ ರಾಜ್ಯದಲ್ಲಿಯೇ ಅತೀ ದೊಡ್ಡ ಜಿಲ್ಲೆ ಎಲ್ಲರೂ ಕೂಡ ಶ್ರಮಿಸಿ ಒಗ್ಗಟ್ಟಾಗಿ ಸುವರ್ಣ ವಿಧಾನಸೌಧದಲ್ಲಿ ಸರಕಾರದ ಪ್ರಮುಖ ಕಚೇರಿಗಳನ್ನು ಸ್ಥಳಾಂತರಿಸಿ ನಿರಂತರವಾಗಿ ಚಟುವಟಿಕೆಯಿಂದ ಕೂಡಿರುವ ಹಾಗೆ ಮಾಡುವ ಜವಾಬ್ದಾರಿ ಎಲ್ಲ ಜನಪ್ರತಿನಿಧಿಗಳ ಮೇಲಿದೆ. ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕೆಂದರು.
ಬೆಳಗಾವಿ ಜಿಲ್ಲೆಯ ಸೇರಿದಂತೆ ಸಮಗ್ರ ಕರ್ನಾಟಕವನ್ನು ಗಮನದಲ್ಲಿಟ್ಟುಕೊಂಡು ಕೆಲಸ ಮಾಡಿ ಜಿಲ್ಲೆಗೆ ಹೆಸರನ್ನು ಕೊಂಡೊಯ್ಯವಲ್ಲಿ ಶ್ರಮಿಸಬೇಕು ಎಂದು ಶ್ರೀಗಳು ಆಶೀರ್ವದಿಸಿದರು.
ಅಲ್ಪಸಂಖ್ಯಾತ ನಿಗಮ ಮಂಡಳಿಯ ಅಧ್ಯಕ್ಷ ಮುಕ್ತಾರ ಹುಸೇನ್ ಪಠಾಣ ಮಾತನಾಡಿ, ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಅವರು ಪಕ್ಷ ನಿಷ್ಠೆಯಿಂದ ಬೆಳೆದು ಬಂದವರು ಇವರಿಗೆ ಲಭಿಸಿದ ಸ್ಥಾನದಿಂದ ನಮ್ಮ ಭಾಗ ಇನ್ನೂ ಅಭಿವೃದ್ದಿಯಾಗಲಿ ಎಂದರು.
ಬುಡಾ ಅಧ್ಯಕ್ಷ ಘೂಳಪ್ಪ ಹೊಸಮನಿ ಮಾತನಾಡಿ, ಎಲ್ಲರೂ ಕೂಡ ಒಮ್ಮನಸ್ಸಿನಿಂದ ಕಾರ್ಯನಿರ್ವಹಿಸಿ ಬೆಳಗಾವಿ ಜಿಲ್ಲೆಯನ್ನು ಅಭಿವೃದ್ದಿ ಪತಥತ್ತ ತೆಗೆದುಕೊಂಡು ಹೊಗೋನ ಎಂದರು.
ರಾಜು ಚಿಕ್ಕನಗೌಡರ, ಮಹಾಂತೇಶ ಒಕ್ಕೂಂದ, ಸುರೇಶ ಯಾದವ್, ಈರಯ್ಯ ಕೋತ್, ಈರಣ್ಣಾ ಅಂಗಡಿ ಉಪಸ್ಥಿತರಿದ್ದರು.

loading...