ರಾಹುಲ್ ಟೀಂ ಇಂಡಿಯಾದ ಸ್ಟಾರ್ ಆಟಗಾರ : ಗವಾಸ್ಕರ

0
28


ಕೋಲ್ಕತ್ತಾ:ಇಂಗ್ಲೆಂಡ್ ವಿರುದ್ದ ಮೊದಲ ಟಿ.೨೦ ಪಂದ್ಯದಲ್ಲಿ ಶತಕ ಬಾರಿಸಿದ್ದ ಟೀಂ ಇಂಡಿಯಾದ ಯುವ ಆಟಗಾರ ಕನ್ನಡಿಗ ಕೆ.ಎಲ್. ರಾಹುಲ್ ಭವಿಷ್ಯದಲ್ಲಿ ಭಾರತದ ಸ್ಟಾರ್ ಆಟಗಾರ ಎಂದು ಟೀಂ ಇಂಡಿಯಾದ ಮಾಜಿ ಆಟಗಾರ ಸುನೀಲ್​ ಗವಾಸ್ಕರ್​ ಹೇಳಿದ್ದಾರೆ.

ಇಂಡಿಯನ್​ ಪ್ರೀಮಿಯರ್​ ಲೀಗ್​​ನಲ್ಲಿ ಕಿಂಗ್ಸ್​ ಇವೆಲೆನ್​ ಪಂಜಾಬ್​ ತಂಡದ ಪರ ಅಬ್ಬರಿಸಿದ್ದ ರಾಹುಲ್​, ಇದೀಗ್​ ಇಂಗ್ಲೆಂಡ್​ನಲ್ಲೂ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಐರ್ಲೆಂಡ್​ ವಿರುದ್ಧದ ಮೊದಲ ಪಂದ್ಯದಿಂದ ಹೊರಗೆ ಉಳಿದಿದ್ದ ರಾಹುಲ್​ 2ನೇ ಪಂದ್ಯದಲ್ಲಿ ಕೇವಲ 36 ಎಸೆತಗಳಲ್ಲಿ ಬರೋಬ್ಬರಿ 70ರನ್​ಗಳಿಕೆ ಮಾಡಿ ತಮ್ಮ ಸಾಮರ್ಥ್ಯ ತೋರಿಸಿದ್ದರು. ಅದರ ಫಲವಾಗಿ ಇಂಗ್ಲೆಂಡ್​ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಅವಕಾಶ ಪಡೆದುಕೊಂಡಿದ್ದ ರಾಹುಲ್​ ಮೂರನೇಯವರಾಗಿ ಕಣಕ್ಕಿಳಿದು ಅಜೇಯ(101)ಶತಕಗಳಿಸಿ ಎಲ್ಲರ ಗಮನ ಸೆಳೆದಿದ್ದರು.

loading...