ರಾಹುಲ ಗಾಂಧಿ ಪ್ರಧಾನಿ ಆಗ್ತಾರೆ: ಸಿಎಂ ಸಿದ್ದರಾಮಯ್ಯ ಭವಿಷ್ಯ

0
109

ಕನ್ನಡಮ್ಮ ಸುದ್ದಿ
ಬೆಳಗಾವಿ:30 ಮುಂದಿನ ವಿಧಾನ ಸಭೆ ಚುನಾವಣೆಯಲ್ಲಿ ಬೆಳಗಾವಿಯಲ್ಲಿ ಅತೀ ಹೆಚ್ಚು ಸ್ಥಾನವನ್ನು ಗೆದ್ದು ಕರ್ನಾಟಕದಲ್ಲಿ ಮತ್ತೇ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರಲಿದೆ. ಅಲ್ಲದೆ 2019ರ ಲೋಕ ಸಭಾ ಚುನಾವಣೆಯಲ್ಲಿ ಕೇಂದ್ರದಲ್ಲಿ ರಾಹುಲ ಗಾಂಧಿ ಪ್ರಧಾನಿ ಆಗುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಭವಿಷ್ಯ ನುಡಿದರು.
ಅವರು ಶುಕ್ರವಾರ ಅಥಣಿ ತಾಲೂಕಿನಲ್ಲಿ ಕಾಂಗ್ರೆಸ್ ಸಮಾವೇಶನದಲ್ಲಿ ಮಾತನಾಡುತ್ತ, ರಾಜ್ಯದ ಅತೀ ಹೆಚ್ಚು ವಿಧಾನ ಸಭಾ ಕ್ಷೇತ್ರಹೊಂದಿರುವ ಬೆಳಗಾವಿಯಲ್ಲಿ ಕಳೆದ ಬಾರಿ ನಾವು ಅಂದುಕೊಂಡಂತೆ ಹೆಚ್ಚು ಸ್ಥಾನ ಗೆಲ್ಲಲು ಸಾಧ್ಯವಾಗಲಿಲ್ಲ. ಬರುವ 2018ರ ಚುನಾವಣೆಯಲ್ಲಿ ಬೆಳಗಾವಿಯಲ್ಲಿ ಅತೀ ಹೆಚ್ಚು ಸ್ಥಾನಗಳನ್ನು ಗೆದ್ದು ಮತ್ತೇ ರಾಜ್ಯದಲ್ಲಿ ಅಧಿಕಾರ ಹಿಡಿಯುತ್ತೇವೆ. 2019ರಲ್ಲೂ ಲೋಕಸಭಾ ಚುನಾವಣೆಯಲ್ಲಿಯೂ ಸಹ ರಾಹುಲ ಗಾಂಧಿ ಪ್ರಧಾನಿ ಆಗಲಿದ್ದಾರೆ ಎಂದು ಭವಿಷ್ಯ ನುಡಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ರೈತರು, ಬಡವರು ಹಾಗೂ ಜನಸಾಮಾನ್ಯರ ಸರಕಾರವಾಗಿದೆ. ರಾಜ್ಯದ ಜನತೆ ಕಾಂಗೆಸ್‍ನ ಕೊಡುಗೆಯನ್ನು ಮರೆತಿಲ್ಲ ಎಂದರು.

ಜಿಲ್ಲೆಯ ಕಾಂಗ್ರೆಸ್ ಮುಖಂಡರ ಮಧ್ಯದಲ್ಲಿರುವ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಪಕ್ಷ ಬಲಿಷ್ಠಗೊಳಿಸಿ. ಒಟ್ಟಾಗಿ ಕೆಲಸ ಮಾಡಿದರೆ ಜಿಲ್ಲೆಯಲ್ಲಿ ಆರು ಸೀಟುಗಳಿಗಿಂತ ಹೆಚ್ಚು ಸ್ಥಾನಗಳಲ್ಲಿ ಗೆಲ್ಲವು ಸಾಧಿಸಲ್ಲಿಕ್ಕೆ ಸಾಧ್ಯವೆಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಕಾಂಗ್ರೆಸ್ ನಾಯಕರುಗಳಿಗೆ ಕಿವಿ ಮಾತು ಹೇಳಿದ ಪ್ರಸಂಗ ಅಥಣಿಯಲ್ಲಿ ಜರುಗಿದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಜರುಗಿತು.
ನಮ್ಮಗೆ ಯಾರು ನಮ್ಮಲ್ಲಿ ಶತ್ರುಗಳಿಲ್ಲ ಎನ್ನುವುದು ಬೆಳಗಾವಿ ಕಾಂಗ್ರೆಸ್ ಮುಖಂಡರಿಗೆ ಅರ್ಥವಾಗಬೇಕು. ಅರ್ಥ ಮಾಡಿಕೊಳ್ಳಬೇಕು ಎಂದು ಖಡಕ ಎಚ್ಚರಿಕೆ ನೀಡಿದ ಅವರು, ನಮ್ಮಗೆ ಬಿಜೆಪಿ ಶತ್ರು ಎಂಬುದನ್ನು ತಿಳಿದು ಹೋರಾಟ ನಡೆಸಬೇಕು ಎಂದರು.
loading...